ಹವ್ಯಾಸಿ ಪತ್ರಕರ್ತರಾಗಿಯೂ ಬದುಕು ಕಟ್ಟಿಕೊಳ್ಳಬಹುದು- ಗುರುಪ್ರಸಾದ್ ಟಿ.ಎನ್

Upayuktha
0

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮ

 


ಪುತ್ತೂರು:  ಫ್ರಿಲಾನ್ಸ್ ಪತ್ರಿಕೋದ್ಯಮ ಎನ್ನುವುದು ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆಯ ಕೇತ್ರ. ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವಾರು ಇರುತ್ತದೆ. ಇಲ್ಲಿ ಪತ್ರಕರ್ತರು ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ  ಬೇರೆ ಬೇರೆ ಕೆಲಸಗಳನ್ನು ಮಾಡಿ ಆದಾಯವನ್ನು ಗಳಿಸಬಹುದು. ಪ್ರಸ್ತುತ ಕಾಲಘಟ್ಟದಲ್ಲಿ ನಿರ್ದಿಷ್ಟ ಆದಾಯಕ್ಕೆ ಅವಲಂಬಿತರಾಗಿರುವುದು ಕಷ್ಟ. ಆದರೆ ಇಲ್ಲಿ ಕೆಲವೊಂದು ಸಂದರ್ಭದಲ್ಲಿ ನಮ್ಮ ಕೆಲಸಕ್ಕೆ ನಿರೀಕ್ಷೆಗೂ ಮೀರಿ ಆದಾಯಗಳನ್ನು ಮಾಡಬಹುದು. ಈ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಆಯ್ಕೆಗಳಿವೆ ಎಂದು ಮಂಗಳೂರಿನ ಹವ್ಯಾಸಿ ಪತ್ರಕರ್ತ ಗುರುಪ್ರಸಾದ್ ಟಿ.ಎನ್ ಹೇಳಿದರು.

   

ಇವರು ಪುತ್ತೂರಿನ ವಿವೇಕಾನಂದ  ಕಲಾ,ವಿಜ್ಞಾನ  ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಪತ್ರಿಕೋದ್ಯಮ ವಿಭಾಗದ ವತಿಯಿಂದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿಚಾರ ಸಂವಾದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ನಾವು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾಡಿದ ಕೆಲಸಗಳು ಎಂದಿಗೂ ವ್ಯರ್ಥವಲ್ಲ. ವರದಿಗಾರಿಕೆ, ನುಡಿಚಿತ್ರ ಬರವಣೆಗೆ, ಕಾರ್ಟೂನ್ ಬಿಡಿಸುವುದು ಹೀಗೆ ಅನೇಕ ಮಜಲುಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಯಶಸ್ವಿ ಹವ್ಯಾಸಿ ಪತ್ರಕರ್ತರಾಗಲು ಸಾಧ್ಯ ಎಂದು ಸಲಹೆ ನೀಡಿದರು.

   

ಈ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್ ನಿಡ್ಪಳ್ಳಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಹವ್ಯಾಸಿ ಪತ್ರಿಕೊದ್ಯಮದಲ್ಲಿ ತೊಡಗಿಸಿಕೊಂಡರೆ ಮುಂದೆ ಉದ್ಯೋಗದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಉಪಯೋಗವಾಗುತ್ತದೆ. ಅಲ್ಲದೇ ಹವ್ಯಾಸಿ ಪತ್ರಿಕೋದ್ಯಮದಿಂದ ಸಣ್ಣ ಪುಟ್ಟ ಆದಾಯವನ್ನು ಪಡೆದು ವಿದ್ಯಾಭ್ಯಾಸವನ್ನು ಅಡೆತಡೆಯಿಲ್ಲದೆ ಮುಂದುವರೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದಲ್ಲಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಶ್ರೀ ಪಿ.ಕೆ ಉಪಸ್ಥಿತರಿದ್ದರು. ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ಚೈತ್ರಾ ಭಟ್ ಸ್ವಾಗತಿಸಿ,  ದೀಪ್ತಿ ಅಡ್ಡಂತಡ್ಕ ನಿರ್ವಹಿಸಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top