ಪ್ರೊ.ರಾಕೇಶ್.ಎಂ ಇವರಿಗೆ ಡಾಕ್ಟರೇಟ್ ಪದವಿ

Upayuktha
0



ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ನಾತಕೋತ್ತರ ಎಂಬಿಎ ವಿಭಾಗದ ಪ್ರೊ.ರಾಕೇಶ್.ಎಂ ಇವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. 


ಕ್ಯಾಪಿಟಲ್ ಸ್ಟçಕ್ಚರ್ ಡಿಸಿಷನ್ಸ್ ಎ ಸ್ಟಡಿ ಆಫ್ ಇಂಡಿಯನ್ ಕಂಪೆನೀಸ್ (Capital structure decisions a study of Indian companies) ಎನ್ನುವ ವಿಷಯದ ಬಗ್ಗೆ ಬಳ್ಳಾರಿಯ ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಡ್ ಮ್ಯಾನೇಜ್‌ಮೆಂಟ್‌ನ  ಡಾ.ಜಾನೆಟ್ ಜ್ಯೋತಿ ಡಿ’ಸೋಜ ಅವರ ಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ಮಾಡಿದ್ದಾರೆ. ಇವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು 14 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ. 


ಡಾ.ರಾಕೇಶ್.ಎಂ ಅವರ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅವರನ್ನು ಅಭಿನಂದಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top