ಪುತ್ತೂರು: ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ವೈದೇಹಿ ಸಭಾಂಗಣದ ಉದ್ಘಾಟನೆಯನ್ನು 29 ಏಪ್ರಿಲ್ 2024 ನೇ ಸೋಮವಾರ ಬೆಳಗ್ಗೆ 9.45 ಕ್ಕೆ ಸರಿಯಾಗಿ ಹಮ್ಮಿಕೊಳ್ಳಲಾಗಿದೆ.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿಧ್ಯಾವರ್ಧಕ ಸಂಘ, ಪುತ್ತೂರು ಇದರ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಹಿಸಲಿದ್ದಾರೆ ಹಾಗೂ ಸಭಾಂಗಣದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಷ್ಟೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣದ ಪ್ರಾಂತ ಪ್ರಚಾರ ಪ್ರಮುಖ್ ಶ್ರೀ ರಾಜೇಶ್ ಪದ್ಮಾರ್ ಭಾಗವಹಿಸಲಿದ್ದಾರೆ. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರವೀಂದ್ರ ಪಿ., ಸಂಚಾಲಕರಾದ ಶ್ರೀ ಗೋಪಾಲಕೃಷ್ಣ ಭಟ್ ಹಾಗೂ ಕಾಲೇಜು ಪ್ರಾಂಶುಪಾಲರಾದ ಶ್ರೀ ಮಹೇಶ್ ನಿಟಿಲಾಪುರ ಈ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವಿಧ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು, ಮುಖ್ಯಸ್ಥರು, ಸಿಬ್ಬಂದಿಗಳು, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಪೋಷಕರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು, ಹಿರಿಯ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ