ವಿವೇಕಾನಂದ ಕಾಲೇಜ್‌: ಮತದಾನ ಜಾಗೃತಿ ಅಭಿಯಾನದ ಬೀದಿ ನಾಟಕ

Upayuktha
0



ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿ ದ.ಕ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ಇರದ ಸಹಯೋಗದಲ್ಲಿ ಮಹಿಳಾ ಕಾಲೇಜು ಪುತ್ತೂರು ವಿದ್ಯಾರ್ಥಿಗಳ ತಂಡದಿಂದ ಮತದಾನ ಜಾಗೃತಿ ಅಭಿಯಾನದ ಬೀದಿ ನಾಟಕ ನಡೆಯಿತು. ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಇದರ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸಹ ಮತದಾನವನ್ನು ಮಾಡಬೇಕು ಎಂಬ ದೃಷ್ಟಿಯಿಂದ ವಿದ್ಯಾರ್ಥಿಗಳಿಗಾಗಿ ಕಾಲೇಜಿನಾವರಣದಲ್ಲಿ ಜಾಗೃತಿ ಅಭಿಯಾನ ನಡೆಯಿತು.


ಭರತ್ ರಾಜ್,ಮಾಹಿತಿ ಶಿಕ್ಷಣ ಸಂವಹನ ಸಂಯೋಜಕ ತಾಲೂಕು ಪಂಚಾಯತ್ ಪುತ್ತೂರು, ತುಳಸಿ, ಪ್ರಥಮ ದರ್ಜೆ ಸಹಾಯಕರು ತಾಲೂಕು ಪಂಚಾಯತ್ ಪುತ್ತೂರು, ಪತ್ರಕರ್ತ ರಂಗಕರ್ಮಿ ಮೌನೇಶ್ ವಿಶ್ವಕರ್ಮ ರಂಗ ನಿರ್ದೇಶಕ,ಕಾಲೇಜಿನ ವಿಶೇಷಾಧಿಕಾರಿ ಡಾ.ಶ್ರೀಧರ ನಾಯಕ್, ಸಮಾಜ ಶಾಸ್ತ್ರದ ಮುಖ್ಯಸ್ಥೆ ವಿದ್ಯಾ ಎಸ್, ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಡಾ.ವಿಷ್ಣುಕುಮಾರ್ ಎ., ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕಿ ದೀಪಿಕಾ ಎಸ್ ಉಪಸ್ಥಿತರಿದ್ದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top