ಪತ್ರಿಕೋದ್ಯಮ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Upayuktha
0


ಉಜಿರೆ: ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಕರ್ನಾಟಕ ರಾಜ್ಯ ಮಟ್ಟದ ವಿಶ್ವವಿದ್ಯಾಲಯ ಹಾಗೂ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.


ಕೊಪ್ಪಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಬಿ.ಕೆ. ರವಿ ಸಂಘದ ಅಧ್ಯಕ್ಷರಾಗಿ ಮರು ಆಯ್ಕೆಗೊಂಡಿದ್ದಾರೆ.


ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪತ್ರಿಕೋದ್ಯಮ ಅಧ್ಯಾಪಕರ ವಿಶೇಷ ಕಾರ್ಯಾಗಾರ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು.


ದಕ್ಷಿಣ ಕನ್ನಡ ಜಿಲ್ಲಾ ಪತ್ರಿಕೋದ್ಯಮ ಅಧ್ಯಾಪಕರ ಸಂಘದ ಗೌರವಾಧ್ಯಕ್ಷರಾಗಿಯೂ ಡಾ. ಭಾಸ್ಕರ ಹೆಗಡೆ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top