ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭರ್ಜರಿ ರೋಡ್ ಶೋಗೆ ಮಂಗಳೂರು ಮಹಾನಗರಿಯಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಜನರು ಸಾಕ್ಷಿಯಾದರು.
ಭಾನುವಾರ ಸಂಜೆ 8 ಗಂಟೆಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಪ್ರಾರಂಭಿಸಿದ ರೋಡ್‌ಶೋ ನವಭಾರತ ವೃತ್ತದಲ್ಲಿ ಕೊನೆಗೊಂಡಿತು. ರಸ್ತೆಯ ಇಕ್ಕೆಲಗಳಲ್ಲೂ ಸಂಜೆ 5 ಗಂಟೆಯಿಂದಲೇ ಜಮಾಯಿಸಲು ಆರಂಭಿಸಿದ ಜನರು ಪ್ರಧಾನಿ ಮೋದಿ ಅವರ ಆಗಮನಕ್ಕಾಗಿ ಕಾತರದಿಂದ ಕಾಯುತ್ತಿದ್ದರು.
ಮೈಸೂರಿನಲ್ಲಿ ಸಾರ್ವಜನಿಕ ಸಮಾವೇಶವನ್ನು ಮಗಿಸಿದ ಬಳಿಕ ರಾತ್ರಿ 7:30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರು ನಗರದೊಳಕ್ಕೆ ಪ್ರವೇಶಿಸುತ್ತಿದ್ದಂತೆಯೇ ಮೋದಿ ಮೋದಿ ಎಂಬ ಘೋಷಣೆ ಮುಗಿಲು ಮುಟ್ಟಿತು.
ರಸ್ತೆಯುದ್ದಕ್ಕೂ ಅಲ್ಲಲ್ಲಿ ಕರಾವಳಿಯ ಸಂಸ್ಕೃತಿ ಬಿಂಬಿಸುವ ಪ್ರದರ್ಶನಗಳನ್ನು ಏರ್ಪಡಿಸಲಾಗಿತ್ತು.
ತೆರೆದ ವಾಹನದಲ್ಲಿ ಕಮಲದ ಚಿಹ್ನೆಯನ್ನು ಹಿಡಿದು ಜನರೆಡೆಗೆ ಕೈಬೀಸುತ್ತಾ ಸಾಗಿದ ಪ್ರಧಾನಿ ಮೋದಿ ಅವರನ್ನು ಕಂಡ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು.
ಮೋದಿ ಅವರ ಅಕ್ಕಪಕ್ಕದಲ್ಲಿ ದಕ್ಷಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಿಂತಿದ್ದರು.
ರೋಡ್ ಶೋ ಆರಂಭಕ್ಕೆ ಮುನ್ನ ಬ್ರಹ್ಮಶ್ರೀ ನಾರಾಯಣಗುರುಗಳ ಪ್ರತಿಮೆಗೆ ಪ್ರಧಾನಿ ಮೋದಿ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ