ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಎನ್ ಸಿಸಿ ಘಟಕದ ಬಿಸಿಎ ವಿದ್ಯಾರ್ಥಿ ಎಂ.ಶಮಂತ್ ಇವರು ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಆಯ್ಕೆಯಾಗಿದ್ದು ಇವರನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಕಾಲೇಜಿನಲ್ಲಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಎನ್ ಸಿಸಿ ಅಧಿಕಾರಿ ಲೆ. ಭಾಮಿ ಅತುಲ್ ಶೆಣೈ ಉಪಸ್ಥಿತರಿದ್ದರು. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದರು. ಇವರು ಮೂಲತಃ ಸುಳ್ಯ ತಾಲೂಕಿನ ಮಂಡೆಕೋಲು ನಿವಾಸಿ ಕರುಣಾಕರ ಗೌಡ ಹಾಗೂ ಸುಶೀಲ ದಂಪತಿಯ ಪುತ್ರ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ