ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Upayuktha
0

 


ಶಿವಮೊಗ್ಗ: ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಸಾಹಿತ್ಯ ಹುಣ್ಣಿಮೆ  ಒಟ್ಟಾಗಿ ಏರ್ಪಡಿಸಲು ತೀರ್ಮಾನ ಮಾಡಲಾಗಿದೆ. 


ಮೇ ತಿಂಗಳ ಕೊನೆಯ ವಾರದಲ್ಲಿ ಸಮ್ಮೇಳನ ನಡೆಯಲಿದೆ ಎಂದು ಡಿ. ಮಂಜುನಾಥ ತಿಳಿಸಿದ್ದಾರೆ.

         

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರೊಂದಿಗೆ ನಡೆದ ಸಮಾಲೋಚನೆ ನಂತರ ಪೂಜ್ಯರ ಮಾರ್ಗದರ್ಶನ ದಲ್ಲಿ 19 ನೇ ವರ್ಷದ ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ  ನಡೆಸಲು ಯೋಜನೆ ಮಾಡಲಾಯಿತು ಎಂದು ಅವರು ವಿವರಿಸಿದರು.

         ‌

ತಾಲ್ಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ  ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಮ್ಮೇಳನ ನಡೆದಿದೆ.  ಅಲ್ಲಿ ಆಯ್ಕೆ ಯಾದವರು ಸೇರಿದಂತೆ ನಾಡಿನಾದ್ಯಂತ ಸಾಹಿತ್ಯ ಕೃಷಿಯಲ್ಲಿ ತೊಡಗಿರುವ ಪಿ. ಯು. ವರೆಗೆ ಓದುತ್ತಿರುವ ಮಕ್ಕಳು ಭಾಗವಹಿಸಲು ಅವಕಾಶವಿದೆ. 


ಮಕ್ಕಳು ತಾವು ಸ್ವಂತ ಬರೆದ ಕವನ, ಕಥೆ, ಪ್ರಬಂಧ ಗಳ ಜೊತೆಗೆ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಶಾಲೆ, ತಂದೆ, ತಾಯಿ ಒಪ್ಪಿಗೆ ಪಡೆದು ಕಳುಹಿಸಲು ಕೋರುತ್ತೇವೆ.


ಸಮ್ಮೇಳನದಲ್ಲಿ ಭಾಗವಹಿಸುವ ಮಕ್ಕಳು, ಪೋಷಕರಿಗೆ ಸಾದಾರಣ ವಸತಿ, ಊಟ, ತಿಂಡಿ ವ್ಯವಸ್ಥೆ ಮಾಡಲಾಗುವುದು. ನೋಂದಾಯಿಸಿದವರಿಗೆ ಮಾತ್ರ ಅವಕಾಶ. 


ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತಿಯಿರುವ ಮಕ್ಕಳು ಮೇ ೧೦ ರೊಳಗೆ ಡಿ. ಮಂಜುನಾಥ, ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಆರ್.ಟಿ.ಓ. ಕಚೇರಿ ರಸ್ತೆ, ಶಿವಮೊಗ್ಗ ೫೭೭೨೦೪ ದೂರವಾಣಿ : 9449552795 ಗೆ ಸಂಪರ್ಕಿಸಬಹುದು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top