ಗೋವಿಂದ ದಾಸ ಕಾಲೇಜಿನಲ್ಲಿ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮ

Upayuktha
0



ಸುರತ್ಕಲ್:  ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮದಲ್ಲಿ, ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿ ರಕ್ಷಿತಾ ಎಮ್. ಗೋಲನ್ನವರ್‌ರವರು ಚ.ನ.ಶಂಕರರಾವ್ ಬರೆದ ಮಹಾತ್ಮರ ಮಹಾತ್ಮ ಸ್ವಾಮಿ ವಿವೇಕಾನಂದರು  ಎಂಬ ಪುಸ್ತಕವನ್ನು ಪರಿಚಯಿಸಿದರು. ಈ ಕೃತಿಯಲ್ಲಿ ಸ್ವಾಮಿ ವಿವೇಕಾನಂದರ ಆದರ್ಶದಾಯಕ ಜೀವನ, ಅವರ ಜೀವನಕ್ಕೆ ಸಂಬಂಧಿಸಿದ ಅವಿಸ್ಮರಣೀಯ ಘಟನೆಗಳು, ಅವರು ನೀಡಿದ ಅಮರ ಸಂದೇಶಗಳು ಹಾಗೂ ಅವರ ಬಗ್ಗೆ ರಾಷ್ಟçನಾಯಕರು ವ್ಯಕ್ತಪಡಿಸಿದ ಅಭಿಪ್ರಾಯಗಳು – ಇವೆಲ್ಲವುಗಳ ಪಕ್ಷಿನೋಟ ಈ ಕೃತಿಯಲ್ಲಿ ಸುಂದರವಾಗಿ ಮೂಡಿಬಂದಿವೆೆ  ಎಂದರು. 


ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಕೃಷ್ಣಮೂರ್ತಿಯವರು ,  ರಕ್ಷಿತಾ ಎಮ್.ಗೋಲನ್ನವರ್ ರವರಿಗೆ  ಸ್ಮರಣಿಕೆ ನೀಡಿ ಗೌರವಿಸಿದರು. ಉಪಪ್ರಾಂಶುಪಾಲರಾದ ಪ್ರೊ. ನೀಲಪ್ಪ ವಿ, ಗ್ರಂಥಪಾಲಕಿ ಡಾ.ಸುಜಾತಾ ಬಿ, ಗ್ರಂಥಾಲಯದ ಸಿಬ್ಬಂದಿಗಳು  ಉಪಸ್ಥಿತರಿದ್ದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ ತನುಶ್ರೀ ಸ್ವಾಗತಿಸಿ ವಂದಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top