ತೆಂಕನಿಡಿಯೂರು: ಭಾರತೀಯ ಪ್ರಜಾಪ್ರಭುತ್ವದಲ್ಲಿ ಯುವ ಜನತೆಯ ಪಾತ್ರ ಮಹತ್ತರದ್ದು. ನಮ್ಮ ಜವಾಬ್ದಾರಿ ನಿರ್ವಹಿಸುವುದರ ಜೊತೆಗೆ ಸಮಾಜವನ್ನು ಜಾಗೃತಗೊಳಿಸುವ ಹೊಣೆಗಾರಿಕೆ ಯೊಂದಿಗೆ ಚುನಾವಣಾ ಮತ್ತು ಮತದಾರರ ಜಾಗೃತಿ ಅವಶ್ಯಕಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ನುಡಿದರು.
ಕಾಲೇಜಿನ ಚುನಾವಣಾ ಸಾಕ್ಷರತಾಕ್ಲಬ್ ಮತ್ತು ಯೂತ್ ರೆಡ್‌ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಹಾಗೂ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಆಯೋಜಿಸಿದ ಮತದಾರರ ಸಾಕ್ಷರತಾ ಜಾಥ ಉದ್ಘಾಟಿಸಿ ಮಾತನಾಡಿದರು. ತೆಂಕನಿಡಿಯೂರು ಗ್ರಾಮ ಪಂಚಾಯತ್ ಪರಿಸರದಲ್ಲಿ ಮತದಾರರ ಜನ ಜಾಗ್ರತಿ ಜಾಥದೊಂದಿಗೆ ಮತದಾರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸ್‌ಸಿ ಸಂಚಾಲಕರಾದ ಡಾ. ಮೇವಿ ಮಿರಾಂದ. ತೆಂಕನಿಡಿಯೂರು ಗ್ರಾಮ ಪಂಚಾಯತ್‌ಅಭಿವೃದ್ಧಿ ಅಧಿಕಾರಿ ದಯಾನಂದ್, ಕಾರ್ಯದರ್ಶಿ ವಸಂತ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕರಾದ ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ರೆಡ್‌ಕ್ರಾಸ್ ಘಟಕ ಸಂಚಾಲಕರಾದ ಪ್ರಶಾಂತ್ ನೀಲಾವರ, ರಾಷ್ಟ್ರೀಯ ಸೇವಾಯೋಜನಾಧಿಕಾರಿ ಡಾ. ರಘು ನಾಯ್ಕ, ಗ್ರಂಥ ಪಾಲಕರಾದ ಕೃಷ್ಣ ಸಾಸ್ತಾನ, ಅರ್ಥಶಾಸ್ತ್ರ ಉಪನ್ಯಾಸಕರಾದ ಅಶೋಕ್, ಶಿವಯ್ಯ ಗೌಡ, ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳೊಂದಿಗೆ ಜಾಥದಲ್ಲಿ ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ