ಮಂಗಳೂರು: ಇದೇ ಬರುವ ವಿಷು ಸಂಕ್ರಮಣದ ವಿಶೇಷತೆಯನ್ನು ಸಾರುವ ತುಳುವರ ಬಿಸು ಪರ್ಬಾಚರಣೆಯನ್ನು ತುಳುಕೂಟ (ರಿ) ಕುಡ್ಲ ಸಂಸ್ಥೆಯು ಶ್ರೀಕ್ಷೇತ್ರ ಮಂಗಳಾದೇವಿಯಲ್ಲಿ ಏ.14ರ ಭಾನುವಾರ ಸಂಜೆ 3:30 ರಿಂದ ಆಚರಿಸಲಿದೆ.
ಶ್ರೀಮಂಗಳಾದೇವಿ ದೇವಳದ ಆಡಳಿತ ಮೊಕ್ತೇಸರ ಅರುಣ್ ಕುಮಾರ್ ಐತಾಳ್ ರವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕೂಟದ ಅಧ್ಯಕ್ಷ ಮರೋಳಿ ಬಿ. ದಾಮೋದರ ನಿಸರ್ಗ ಅಧ್ಯಕ್ಷತೆ ವಹಿಸಲಿದ್ದಾರೆ ನಮ್ಮ ಕುಡ್ಲದ ತುಳು ವಾರ್ತಾ ವಾಚಕಿ ಡಾ|| ಪ್ರಿಯಾ ಹರೀಶ್ ವಿಷುವಿನ ವಿಶೇಷತೆಯ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಧರ್ಮದರ್ಶಿ ಡಾ|| ಹರಿಕೃಷ್ಣ ಪುನರೂರು, ಪಣಂಬೂರು ರೋಟರಿ ಕ್ಲಬ್ ನ ಅಧ್ಯಕ್ಷ ಸುಧಾಕರ ಕುಲಾಲ್ ಸುರತ್ಕಲ್, ಕಾವೂರು ವ್ಯವಸಾಯ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಶ್ರೀ ಕೆ.ಹರಿಶ್ಚಂದ್ರ' ಹಿರಿಯ ಸಾಹಿತಿ ಡಾ|| ವಸಂತ ಕುಮಾರ್ ಪೆರ್ಲ ಮುಖ್ಯ ಅಭ್ಯಾಗತರಾಗಿ ಭಾಗವಹಿಸುವರು.
ಸಭಾ ಕಾರ್ಯಕ್ರಮದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪ್ರಾಯೋಜಕತ್ವದ ರತ್ನವರ್ಮ ಹೆಗ್ಗಡೆ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಚಕ್ರ ಪಾಣಿ ನೃತ್ಯಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ವಿದ್ವಾನ್ ಸುರೇಶ್ ಅತ್ತಾವರ್ ರವರ ನಿರ್ದೇಶನದಲ್ಲಿ ಬಿಸು ನೃತ್ಯ ವೈಭವ ಕಾರ್ಯಕ್ರಮ ಜರಗಲಿದೆ.
ಇದೇ ಸಂದರ್ಭದಲ್ಲಿ ರತ್ನವರ್ಮ ಹೆಗ್ಗಡೆ ಪ್ರಶಸ್ತಿ ಪುರಸ್ಕೃತರಾದ ಶಶಿರಾಜ್ ಕಾವೂರು (ಪ್ರಥಮ), ನವೀನ್ ಸುವರ್ಣ ಪಡ್ರೆ (ದ್ವಿತೀಯ), ಎಲ್ಲೂರು ಆನಂದ ಕುಂದರ್ (ತೃತೀಯ) ಪ್ರಶಸ್ತಿಗಳನ್ನು ವಿತರಿಸಲಾಗುವುದು ಎಂದು ತುಳುಕೂಟದ ಪ್ರ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ