ತುಳುನಾಡಿನ ಸಾಂಸ್ಕೃತಿಕ ವೈಭವ ವೈಶಿಷ್ಟ್ಯಪೂರ್ಣ: ಬೆನೆಟ್ ಜಿ ಅಮ್ಮನ್ನ

Upayuktha
0


ಮಂಗಳೂರು: "ಕರಾವಳಿ ಕರ್ನಾಟಕದ ವೈವಿಧ್ಯಪೂರ್ಣ ಆಚರಣೆಗಳು ಸಾಂಸ್ಕೃತಿಕ ಹಾಗೂ ವೈಜ್ಞಾನಿಕ ಹಿನ್ನೆಲೆಯನ್ನು ಹೊಂದಿವೆ" ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ಸಂಶೋಧಕರಾದ ಬೆನೆಟ್ ಜಿ. ಅಮ್ಮನ್ನ ಅಭಿಪ್ರಾಯಪಟ್ಟರು.


ಅವರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಮಂಗಳೂರು ಇಲ್ಲಿನ ಇತಿಹಾಸ ವಿಭಾಗದ ವತಿಯಿಂದ ನಡೆಸಲಾದ 'ಕರಾವಳಿಯ ಸಾಂಸ್ಕೃತಿಕ ಪರಂಪರೆಯ ವೈಶಿಷ್ಟ್ಯಗಳು' ಎಂಬ ವಿಚಾರಗೋಷ್ಠಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅವರು "ತುಳುನಾಡಿನ ಸಾಂಸ್ಕೃತಿಕ ವೈಭವ ವೈಶಿಷ್ಟ್ಯಪೂರ್ಣವಾದುದು" ಎನ್ನುತ್ತಾ ಅದನ್ನು ವಿವಿಧ ದೃಷ್ಟಾಂತಗಳ ಮೂಲಕ ವಿವರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಜಗದೀಶ ಬಾಳ ವಹಿಸಿದ್ದರು. ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಶೈಲ ಕೆ.ಎನ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಉಪನ್ಯಾಸಕರಾದ ವೆಂಕಟೇಶ ಜಿ. ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕುಮಾರಿ ಆಡ್ಲಿನ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಕುಮಾರಿ ಪವಿತ್ರ ಸ್ವಾಗತಿಸಿ ಕುಮಾರಿ ಮೈಮೂನ ಮನೂರ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top