ಉಡುಪಿ: ಇನ್ನೇನು ಲೋಕಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಎಲ್ಲಾ ರಾಜಕೀಯ ಪಕ್ಷದವರು ಪ್ರಚಾರದಲ್ಲಿ ಬಿಸಿಯಾಗಿದ್ದಾರೆ. ಈ ಸಮಯದಲ್ಲಿ ಚುನಾವಣಾ ಆಯೋಗದವರು ಹೆಚ್ಚಿನ ಮತದಾನ ಆಗಬೇಕೆಂಬ ಕನಸನ್ನು ಹೊತ್ತು ಸ್ವೀಪ್ ಕಾರ್ಯಕ್ರಮದ ಮೂಲಕ ಜನ ಜಾಗೃತಿ ಮೂಡಿಸುತ್ತಿದ್ದಾರೆ.
ವ್ಯಕ್ತಿತ್ವ ವಿಕಸನ ತರಬೇತಿದಾರ ರಾಘವೇಂದ್ರ ಪ್ರಭು, ಕರ್ವಾಲು ದಂಪತಿಗಳ ಪುತ್ರ ಸಾಯಿಶ್ ರವರ ಬ್ರಹ್ಮೋಪದೇಶ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ವಿಭಿನ್ನವಾಗಿ ನಡೆಸಲಾಯಿತು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ರವಿರಾಜ್ ರವರು ಮತದಾನ ಆಯೋಗದ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಜೇಸಿ ಐ ಉಡುಪಿ ಸಿಟಿ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು. ಈ ರೀತಿಯ ಮಾದರಿ ಕಾರ್ಯಕ್ಕೆ ಜನ ಮೆಚ್ಚುಗೆ ನೀಡಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ