ಸ್ಟ್ರಿಂಗ್ಬೋರ್ಡ್ ಆನ್ಲೈನ್ ಕೋರ್ಸ್ಗಳ ಉಚಿತ ಕಲಿಕೆಯ ಅವಕಾಶ
ಉಜಿರೆ: ವಿದ್ಯಾರ್ಥಿಗಳನ್ನು ವೃತ್ತಿ ಬದುಕಿಗೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ಎಸ್.ಡಿ.ಎಂ ಎಜುಕೇಷನಲ್ ಟ್ರಸ್ಟ್, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಜೊತೆ ಡಿಜಿಟಲ್ ಶಿಕ್ಷಣದಲ್ಲಿನ ಸಹಕಾರಕ್ಕೆ ಒಡಂಬಡಿಕೆ ಮಾಡಿಕೊಂಡಿದೆ.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಮತ್ತು ಇನ್ಫೋಸಿಸ್‌ನ ಗ್ಲೋಬಲ್ ಎಜುಕೇಷನ್ ಸೆಂಟರ್ ನ ಮುಖ್ಯಸ್ಥ ಸುಂದರ್ ಕೆ.ಎಸ್ ಉಜಿರೆಯ ಎಸ್.ಡಿ.ಎಂ ಸೊಸೈಟಿಯ ಕಛೇರಿಯಲ್ಲಿ ಮಂಗಳವಾರ ಒಡಂಬಡಿಕೆ ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಮಾತನಾಡಿದರು. ಇನ್ಫೋಸಿಸ್ ಸಂಸ್ಥೆಯು ಸಮಾಜದ ಒಳಿತಿಗಾಗಿ ತನ್ನ ಜ್ಞಾನ ಪರಿಣಿತಿಯನ್ನು ಹಂಚಿಕೊಳ್ಳಲು ಮುಂದೆ ಬಂದಿದೆ. ಈ ಒಡಂಬಡಿಕೆಯಿಂದಾಗಿ ನಮ್ಮ ಕಾಲೇಜುಗಳು ಇನ್ಫೋಸಿಸ್ನ ಸ್ಪ್ರಿಂಗ್‌ಬೋರ್ಡ್ ಆನ್ಲೈನ್ ವೇದಿಕೆಯಲ್ಲಿರುವ ಕೋರ್ಸುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಅವಕಾಶ ಸಿಗಲಿದೆ ಎಂದರು.
ಇನ್ಫೋಸಿಸ್‌ನ ಗ್ಲೋಬಲ್ ಎಜುಕೇಷನ್ ಸೆಂಟರ್ ನ ಮುಖ್ಯಸ್ಥ ಸುಂದರ್ ಕೆ.ಎಸ್ ಮಾತನಾಡಿದರು.ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಸಾಧನೆಗಳನ್ನು ಗಮನದಲ್ಲಿಟ್ಟುಕೊಂಡು ಈ ಒಡಂಬಡಿಕೆಯ ಜೊತೆ ಮುನ್ನಡೆಯಲು ಇನ್ಫೋಸಿಸ್ ಉತ್ಸುಕವಾಗಿದೆ. ವೃತ್ತಿ ಕ್ಷೇತ್ರದಲ್ಲಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಒಡಂಬಡಿಕೆ ಸಹಕಾರಿಯಾಗಲಿದೆ.ಆಧುನಿಕ ತಂತ್ರಜ್ಞಾನದ ನೆರವಿನಿಂದ ಇನ್ಫೋಸಿಸ್ ರೂಪಿಸಿರುವ ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್ ವ್ಯವಸ್ಥೆಯಡಿ 12 ಸಾವಿರಕ್ಕೂ ಹೆಚ್ಚಿನ ಕೋರ್ಸುಗಳು ಲಭ್ಯವಿವೆ. ಒಡಂಬಡಿಕೆಯ ಅನುಸಾರವಾಗಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಈ ಕೋರ್ಸ್‌ಗಳನ್ನು ಆನ್ ಲೈನ್ ಮೂಲಕ ಉಚಿತವಾಗಿ ಕಲಿಯಬಹುದು.
800ಕ್ಕೂ ಹೆಚ್ಚು ಶಿಕ್ಷಣ ಪರಿಣತರು ಸ್ಪ್ರಿಂಗ್‌ಬೋರ್ಡ್ ಮೂಲಕ ಬೋಧಕರ ಅಗತ್ಯಗಳನ್ನು ಮನಗಂಡು, ಸೂಕ್ತ ತರಬೇತಿ ನೀಡುತ್ತಾರೆ.10 ರಿಂದ 22 ವರ್ಷದೊಳಗಿನ ಯುವಜನರನ್ನು ಕೇಂದ್ರೀಕರಿಸಿ 2025ರ ವೇಳೆಗೆ ಒಂದು ಕೋಟಿ ಜನರಿಗೆ ಡಿಜಿಟಲ್ ಮತ್ತು ಜೀವನ ಕೌಶಲ್ಯಗಳನ್ನು ಕಲಿಸುವುದು ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್‌ನ ಗುರಿಯಾಗಿದೆ. ಭಾರತೀಯ ಭಾಷೆಗಳಲ್ಲೂ ಕೋರ್ಸ್ ಲಭ್ಯವಿದ್ದು, ಈಗಾಗಲೇ 23 ಲಕ್ಷ ವಿದ್ಯಾರ್ಥಿಗಳು ದೇಶಾದ್ಯಂತ ಸ್ಪ್ರಿಂಗ್‌ಬೋರ್ಡ್ ವೇದಿಕೆಯಲ್ಲಿ ಕಲಿಯುತ್ತಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಇನ್ಫೋಸಿಸ್ನ ಪ್ರಿನ್ಸಿಪಾಲ್ ಕನ್ಸಲ್ಟೆಂಟ್ ಸಹನಾ ಕುಮಾರಸ್ವಾಮಿ, ಉಜಿರೆ ಎಸ್.ಡಿ.ಎಂ ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್, ಎಸ್.ಡಿ.ಎಂ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ, ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, ಉಪಪ್ರಾಂಶುಪಾರ ಪ್ರೊ.ಎಸ್.ಎನ್.ಕಾಕತ್ಕರ್, ಆಡಳಿತ ಕುಲಸಚಿವರಾದ ಡಾ.ಶಲಿಪ್ ಎ.ಪಿ, ಪರೀಕ್ಷಾಂಗ ಕುಲಸಚಿವರಾದ ನಂದಕುಮಾರಿ ಮತ್ತು ಇತರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಚಂದ್ರ ಸ್ವಾಗತಿಸಿದರು. ಶಿಕ್ಷಣ ಸಂಸ್ಥೆಯ ಹಣಕಾಸು ವಿಭಾಗದ ನಿರ್ದೇಶಕ ನಿಶ್ಚಲ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


