ಸಂಸ್ಕೃತ ಅಧ್ಯಯನದಿಂದ ಅಪರಿಮಿತ ಜ್ಞಾನ ಸಿದ್ಧಿ: ಡಾ. ಸಚಿನ್ ಕಠಾಳೆ

Upayuktha
0


ಮಂಗಳೂರು: ಸಂಸ್ಕೃತ ಭಾಷೆಯನ್ನು ತಪಸ್ಸಿನ ರೂಪದಲ್ಲಿ ಅಧ್ಯಯನ ಮಾಡುವುದರಿಂದ ಅಪರಿಮಿತ ಜ್ಞಾನ ಸಿದ್ಧಿಯಾಗುತ್ತದೆ. ಸಂಸ್ಕೃತ ಭಾಷೆಯ ಸಂಭಾಷಣೆಯಿಂದ ಮನಸ್ಸಿನ ಸ್ಥಿತಿ ಅತ್ಯಂತ ಶುದ್ಧವಾಗುತ್ತದೆ. ಸಂಸ್ಕೃತ ತಿಳಿದವರು ಎಲ್ಲರ ಜತೆ ಸಂಸ್ಕೃತದಲ್ಲೇ ಸಂಭಾಷಣೆ ಮಾಡುವ ಮೂಲಕ ಭಾಷೆಯನ್ನು ಎಲ್ಲೆಡೆ ಪಸರಿಸಲು ಪ್ರಯತ್ನಿಸಬೇಕು ಎಂದು ಸಂಸ್ಕೃತ ಭಾರತಿಯ ಅಖಿಲ ಭಾರತ ಸಹಪ್ರಶಿಕ್ಷಣ ಪ್ರಮುಖ ಡಾ.ಸಚಿನ್ ಕಠಾಳೆ ಹೇಳಿದರು.


ಸಂಸ್ಕೃತ ಭಾರತೀ ಮಂಗಳೂರು ಇದರ ವತಿಯಿಂದ ನಗರದ ಡೊಂಗರಕೇರಿಯ ಕೆನರಾ ಹೈಸ್ಕೂಲ್‌ನ ಶ್ರೀ ಸುಧೀಂದ್ರ ಸಭಾ ಭವನದಲ್ಲಿ ಭಾನುವಾರ ನಡೆದ ಸಂಸ್ಕೃತ ಮಹೋದಧಿಃ ಜನಪದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.


‘ನಮ್ಮ ಸಂಸ್ಕೃತಿ ಮತ್ತು ಪರಂಪರೆ ಸಂಸ್ಕೃತದಲ್ಲಿದೆ. ಭಾರತದಲ್ಲಿ ಯಾವುದೆಲ್ಲ ಉತ್ತಮವಾದುದು ಇದೆಯೋ ಅದನ್ನು ರಕ್ಷಿಸಬೇಕು. ಯಾವುದು  ಕೆಡುಕು ಬಯಸುತ್ತದೋ ಅದನ್ನು ನಾಶ ಮಾಡಬೇಕು. ಧರ್ಮ ಪಾಲನೆಯೇ ಧರ್ಮ ರಕ್ಷಣೆ ಎಂದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ  ಮಂಗಳೂರು ನಗರ ಸಂಸ್ಕೃತ ಭಾರತೀ ಅಧ್ಯಕ್ಷ ಎಂ.ಆರ್. ವಾಸುದೇವ ಮಾತನಾಡಿ, ಸಂಸ್ಕೃತ ಭಾಷೆ ಭಾರತೀಯ ಭಾಷೆಗಳಿಗೆ ತಾಯಿಯ ಸ್ಥಾನದಲ್ಲಿದೆ. ಎಲ್ಲ ಕಲೆಗಳಿಗೂ, ವಿಜ್ಞಾನಕ್ಕೂ ಸಂಸ್ಕೃತದ ಕೊಡುಗೆ ಇದೆ ಎಂದರು.


ಕಾರ್ಯಕ್ರಮ ಉದ್ಘಾಟಿಸಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ದ.ಕ.ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ್ ರೈ ಮಾತನಾಡಿ ‘ಸಂಸ್ಕೃತ ಭಾಷೆಗೆ ಅದ್ಭುತವಾದ ಶಕ್ತಿ ಇದೆ. ಭಾಷೆ ನಶಿಸಿ ಹೋದರೆ ನಮ್ಮ ಸಂಸ್ಕೃತಿಯೇ ನಾಶವಾಗುತ್ತದೆ ಎಂದರು.


ಸಂಸ್ಕೃತ ಭಾರತೀ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಕೆ.ಎಂ.ಸಿ.ಯ ಪ್ರಾಧ್ಯಾಪಕ ಡಾ. ವೇಣುಗೋಪಾಲ ಅವರ ನೇಮಕವನ್ನು ಘೋಷಿಸಲಾಯಿತು. ಸಂಸ್ಕೃತ ಭಾರತೀ ಪ್ರಾಂತ ಸಂಪರ್ಕ ಪ್ರಮುಖ ಕೆ.ವಿ. ಸತ್ಯನಾರಾಯಣ, ಮಂಗಳೂರು ವಿಭಾಗ ಸಂಯೋಜಕ ನಟೇಶ,, ಮಹಾನಗರ ಸಂಯೋಜಕಿ ಸಂಧ್ಯಾ ಕಾಮತ್, ಗಣಪತಿ ಕಾಮತ್ ಉಪಸ್ಥಿತರಿದ್ದರು.


ರವಿಶಂಕರ ಹೆಗಡೆ ಅತಿಥಿಗಳ ಪರಿಚಯ ಮಾಡಿದರು. ಗಜಾನನ ಬೋವಿಕಾನ ಸ್ವಾಗತಿಸಿ, ಶರಣ್ಯ ವಂದಿಸಿದರು. ಶೀಲಾ ಶಂಕರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಂಸ್ಕೃತದಲ್ಲಿ ಯಕ್ಷಗಾನ ಪ್ರದರ್ಶನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top