ನಾಯಕತ್ವ ಗುಣ, ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆ ಅಗತ್ಯ

Upayuktha
1 minute read
0


ಸುರತ್ಕಲ್: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸುಪ್ತ ಪ್ರತಿಭೆ ಅಡಕವಾಗಿದ್ದು ಉತ್ತಮ ವೇದಿಕೆಗಳು ದೊರಕಿದಾಗ ಆ ಪ್ರತಿಭೆಗಳು ಅನಾವರಣಗೊಳ್ಳುತ್ತದೆ. ಅಧ್ಯಾಪಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳೇ ಸ್ಪರ್ಧೆಗಳನ್ನು ಆಯೋಜಿಸುವುದರಿಂದ ನಾಯಕತ್ವ ಗುಣ ಬೆಳೆಯಲು ಸಾಧ್ಯ ಎಂದು ಉದ್ಯಮಿ ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿ ಭಾಸ್ಕರ್ ರಾವ್ ಬಾಳ ನುಡಿದರು. 


ಅವರು ಗೋವಿಂದ ದಾಸ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತರ್ ಕಾಲೇಜು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ದಿಗಂತ-2024ನ್ನು ಉದ್ಘಾಟಿಸಿ ಮಾತನಾಡಿದರು.


ಮುಖ್ಯ ಅತಿಥಿಗಳಾಗಿದ್ದ ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್‌ನ ಅಧ್ಯಕ್ಷೆ ಡಾ. ಸಾಯಿಗೀತಾ ಮತ್ತು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಡಿ. ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ,  ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೋವಿಂದ ದಾಸ ಕಾಲೇಜು ಅತ್ಯುತ್ತಮ ವೇದಿಕೆಗಳನ್ನು ಒದಗಿಸುತ್ತಿದೆ ಎಂದರು. 


ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿ ಹಿಂದೂ ವಿದ್ಯಾದಾಯಿನೀ ಸಂಘ (ರಿ)ದ ಅಧ್ಯಕ್ಷ ಹೆಚ್, ಜಯಚಂದ್ರ ಹತ್ವಾರ್ ಮಾತನಾಡಿ ವಿದ್ಯಾರ್ಥಿಗಳು ತಮಗೆ ಲಭಿಸಿದ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಹೊರತರಬೇಕು ಎಂದರು. 


ಹಿಂದೂ ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಕಾರ್ಯದರ್ಶಿ ಶ್ರೀರಂಗ ಹೆಚ್. ಮಾತನಾಡಿ ಪಾಠದೊಂದಿಗೆ ಪಠ್ಯೇತರ ಚುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿದಾಗ ಅವರ ಕಲಿಕೆಯು ಅರ್ಥಪೂರ್ಣವಾಗುತ್ತದೆ ಎಂದರು.


ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಮೇಶ್ ಭಟ್ ಶುಭ ಹಾರೈಸಿದರು.


ಕೆನರಾ ಕಾಲೇಜು ಮಂಗಳೂರು ಪ್ರಥಮ ಸಮಗ್ರ ಪ್ರಶಸ್ತಿಯನ್ನು ಮತ್ತು ಎಸ್.ಡಿ.ಎಂ. ಕಾಲೇಜು, ಮಂಗಳೂರು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.

ಉಪ ಪ್ರಾಂಶುಪಾಲ ಪ್ರೊ. ನೀಲಪ್ಪ ವಿ, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ ಪಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್, ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರ ವಿಭಾಗದ ಸಂಯೋಜಕ ಡಾ. ಗಣೇಶ ಆಚಾರ್ಯ, ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕಾರ್ತಿಕ್ ಜೆ.ಎಸ್. ಉಪಸ್ಥಿತರಿದ್ದರು.


ಪಲ್ಲವಿ ಮತ್ತು ಸೌಪರ್ಣಿಕಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸಂಯೋಜಕರಾದ ದರ್ಶನ್ ಕೊಟ್ಟಾರಿ, ಮನೀಶ್ ದೇವಾಡಿಗ, ಧನುಷ್ ದೇವಾಡಿಗ, ಗಾಯತ್ರಿ ಸಾಲ್ಯಾನ್ ಮತ್ತು ಸಂಜನಾ ಎಂ. ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top