ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ: ಆರು ಮಂದಿಗೆ ಗಾಯ, ಓರ್ವ ಗಂಭೀರ

Upayuktha
0


ಬಳ್ಳಾರಿ: ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಾಯಗೊಂಡು ಓರ್ವ ಗಂಭೀರ ಸ್ಥಿತಿಯಲ್ಲಿರುವ ಘಟನೆ ಗುರುವಾರ ಬಳ್ಳಾರಿಯಲ್ಲಿ ನಡೆದಿದೆ.


ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್‌ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡಿದ್ದು, ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್‌ ಎಂಬವರಿಗೆ ಗಂಭೀರ ಗಾಯವಾಗಿದೆ. ಮೂವರು ಸಿಬ್ಬಂದಿಗೆ ಸಣ್ಣ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ವಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಜ್ಯುವೆಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ಡ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಭರ್ತಿ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top