ಬಂಟ್ವಾಳ: ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮದ ಅಧ್ಯಕ್ಷರಾಗಿ ಹಿರಿಯ ಜೇಸಿ, ಕೃಷಿಕ ಆದಿರಾಜ ಜೈನ್ ಕೆ. ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ತಾರಾನಾಥ ಕೊಟ್ಟಾರಿ ಫರಂಗಿಪೇಟೆ, ಕೋಶಾಧಿಕಾರಿಯಾಗಿ ಇಂಜಿನಿಯರ್ ನಾಗೇಶ್ ಕುಲಾಲ್ ಆಯ್ಕೆಯಾಗಿದ್ದಾರೆ ಎಂದು ಲೀಜನ್ ಸ್ಥಾಪಕ ಅಧ್ಯಕ್ಷ ಜಯಾನಂದ ಪೆರಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಕಟಪೂರ್ವ ಅಧ್ಯಕ್ಷ ಡಾ. ಆನಂದ ಬಂಜನ್, ತರಬೇತಿ ವಿಭಾಗದ ಉಪಾಧ್ಯಕ್ಷರಾಗಿ ನ್ಯಾಯವಾದಿ ಶೈಲಜಾ ರಾಜೇಶ್, ಆಡಳಿತ ವಿಭಾಗದ ಉಪಾಧ್ಯಕ್ಷರಾಗಿ ನ್ಯಾಯವಾದಿ ರವೀಂದ್ ಕುಕ್ಕಾಜೆ, ಸಾರ್ವಜನಿಕ ಸಂಪರ್ಕ ಉಪಾಧ್ಯಕ್ಷರಾಗಿ ಸತ್ಯನಾರಾಯಣ ರಾವ್ ಕೈಕುಂಜೆ, ಕಾರ್ಯದರ್ಶಿಯಾಗಿ ತಾರನಾಥ ಕೊಟ್ಟಾರಿ, ಜತೆಕಾರ್ಯದರ್ಶಿಯಾಗಿ ಪಿ.ಮಹಮ್ಮದ್, ನಿರ್ದೇಶಕರಾಗಿ ಜಯಾನಂದ ಪೆರಾಜೆ, ರಾಮಚಂದ್ರ ರಾವ್ ಆಯ್ಕೆಯಾಗಿರುತ್ತಾರೆ. ಹದಿನೈದು ಮಂದಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನೇಮಕವಾಗಿದ್ದಾರೆ.
ಮೇ 12 ರಂದು ಬಿ.ಸಿ.ರೋಡಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾ ಭವನದಲ್ಲಿ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾರತೀಯ ಜೈನ್ ಮಿಲನ್‌ನ ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್, ಗೌರವ ಅತಿಥಿಯಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್‌ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಡಾ. ಕೆ ಅರವಿಂದ ರಾವ್, ಪದಗ್ರಹಣ ಅಧಿಕಾರಿಯಾಗಿ ರಾಷ್ಟ್ರೀಯ ಉಪಾಧ್ಯಕ್ಷ ಕಿಶೋರ್ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


