ಶೈಕ್ಷಣಿಕ ವಿಷಯಗಳ ಜೊತೆಗೆ ಪಠ್ಯೇತರಕ್ಕೂ ಒತ್ತು ನೀಡಿ

Upayuktha
0

ಆಳ್ವಾಸ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಸಾಧಕರಿಗೆ ಪ್ರಶಸ್ತಿ ಪ್ರದಾನ


ವಿದ್ಯಾಗಿರಿ: ಪ್ರಸ್ತುತ ಶೈಕ್ಷಣಿಕ ಹಂತದಲ್ಲಿ  ಗ್ರಂಥಾಲಯವನ್ನು ಹೆಚ್ಚೆಚ್ಚು ಬಳಸಿಕೊಳ್ಳುವುದು ಅತ್ಯಗತ್ಯ ಎಂದು ಆಳ್ವಾಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ ಸಜಿತ್ ಎಂ ಹೇಳಿದರು.


ಆಳ್ವಾಸ್ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ  ಕಾಮರ್ಸ್ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡ ಪ್ರಸ್ತಕ ಶೈಕ್ಷಣಿಕ ಮತ್ತು ಕ್ರೀಡಾ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಪ್ರತಿ ವಿದ್ಯಾರ್ಥಿಯಲ್ಲೂ ಪ್ರತಿಭೆ ಇರುತ್ತದೆ. ಎಂದಿಗೂ ಆ ಪ್ರತಿಭೆಯನ್ನು ಕಡೆಗಣಿಸದೆ, ಮಾಡುವ ಪ್ರತಿಯೊಂದು ಕಾರ್ಯದಲ್ಲೂ ಸಂತೋಷವನ್ನು ಕಾಣಿರಿ ಎಂದರು. ಜೀವನದಲ್ಲಿ ಎಂದಿಗೂ ಸ್ವಾರ್ಥಿಯಾಗದೇ ನೀವು ಬೆಳೆಯಿರಿ, ನಿಮ್ಮೊಂದಿಗೆ ಇರುವವರನ್ನು ಬೆಳೆಸಿ ಎಂದು ಎಲ್ಲಾ ಸಾಧಕರಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಲೈಬ್ರರಿ ಅವಾರ್ಡ್, ಶೈಕ್ಷಣಿಕದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಸಾಂಸ್ಕೃತಿಕ ಸ್ಪರ್ಧಾ ವಿಜೇತರಿಗೆ  ಪ್ರಶಸ್ತಿ, ಕಾಲೇಜು ವಾರ್ಷಿಕೋತ್ಸವ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ನೀಡಲಾಯಿತು.


ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ , ಕಾಮರ್ಸ್ ವಿಭಾಗದ ಮುಖ್ಯಸ್ಥೆ ಶರ್ಮಿಳಾ ಕುಂದರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು  ವಿದ್ಯಾರ್ಥಿನಿ ವಿತುಲ್ ಜೈನ್ ನಿರೂಪಿಸಿ, ಹರ್ಷಿತಾ ಹೆಗ್ಡೆ ಸ್ವಾಗತಿಸಿ , ಮೇಘಾ ಬಿ ವಿ ವಂದಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top