ಮಂಗಳೂರು: ಅವಕಾಶ ವಂಚಿತರಿಗೆ ಅಗತ್ಯವಾದ ಶಿಕ್ಷಣ ಮತ್ತು ಕೌಶಲ ತರಬೇತಿ ಒದಗಿಸಲು ಹೆಚ್ಚಿನ ಗಮನ ಕೇಂದ್ರೀಕರಿಸಿದ ಅಮೆಜಾನ್ ಇದುವರೆಗೆ ದೇಶಾದ್ಯಂತ 78 ಲಕ್ಷ ಮಂದಿಯ ಬದುಕಿನಲ್ಲಿ ಧನಾತ್ಮಕ ಬದಲಾವಣೆ ತಂದಿದೆ.
'ಅಮೆಜಾನ್ ಫ್ಯೂಚರ್ ಎಂಜಿನಿಯರ್'ನಂತಹ ಕಾರ್ಯಕ್ರಮಗಳು ಕಂಪ್ಯೂಟರ್ ವಿಜ್ಞಾನ ಶಿಕ್ಷಣದಲ್ಲಿನ ಅಂತರವನ್ನು ಕಡಿಮೆ ಮಾಡುವ ಗುರಿ ಹೊಂದಿವೆ. ಸಾಮಾಜಿಕ ಮತ್ತು ಆರ್ಥಿಕತೆಯ ವಿವಿಧ ಹಿನ್ನೆಲೆಯಿಂದ ಬರುವ ಯುವ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ವೃತ್ತಿಜೀವನಕ್ಕೆ ಮಹತ್ವದ ಕೌಶಲಗಳನ್ನು ಕರಗತ ಮಾಡಿಕೊಳ್ಳಲು ಅವಕಾಶಗಳನ್ನು ಒದಗಿಸುತ್ತಿದೆ ಎಂದು ಅಮೆಜಾನ್ ಇಂಡಿಯಾದ ಉಪಾಧ್ಯಕ್ಷ ಮತ್ತು ಕಂಟ್ರಿ ಮ್ಯಾನೇಜರ್ ಮನೀಶ್ ತಿವಾರಿ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ 72 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಅಗತ್ಯವಿರುವ ಸಮುದಾಯಗಳ ಸಂಕಷ್ಟಕ್ಕೆ ಕ್ಷಿಪ್ರವಾಗಿ ಸ್ಪಂದಿಸಿ ಪರಿಹಾರ ಸಾಮಗ್ರಿಗಳನ್ನು ತ್ವರಿತವಾಗಿ ಒದಗಿಸುತ್ತಿದೆ. ಇದನ್ನು ಕಾರ್ಯಗತಗೊಳಿಸಲು ದೇಶದಾದ್ಯಂತ ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಪರಿಹಾರ ಸಾಮಗ್ರಿಗಳನ್ನು ತಲುಪಿಸಲು ಅಮೆಜಾನ್ ತನ್ನ ಸರಕು ಪೂರೈಕೆ ಜಾಲವನ್ನು ಸಮರ್ಥವಾಗಿ ಬಳಸಿಕೊಳ್ಳಲಿದೆ. ತುರ್ತಾಗಿ ಸ್ಪಂದಿಸುವುದರ ಹೊರತಾಗಿ, ಆರೋಗ್ಯ, ನೈರ್ಮಲ್ಯ ಮತ್ತು ಉದ್ಯಮಶೀಲತೆ ಉತ್ತೇಜಿಸುವ ಮೂಲಕ ಅಮೆಜಾನ್ ಸ್ಥಳೀಯ ಸಮುದಾಯಗಳಿಗೆ ಅಗತ್ಯ ಉತ್ತೇಜನವನ್ನೂ ನೀಡಲಿದೆ. ಮಹಿಳೆಯರು ಮತ್ತು ಅಂಗವಿಕಲರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ವಿಶೇಷ ಒತ್ತು ನೀಡಲಾಗಿದೆ ಎಂದು ವಿವರಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ