ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Upayuktha
0

ಉಜಿರೆ: ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 23ರಂದು ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ ನಡೆಯಿತು.

 

ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಸರಕಾರಿ ಐಟಿಐ ಪ್ರಾಂಶುಪಾಲ ಹಾಗೂ ಬೆಳ್ತಂಗಡಿ ತಾಲೂಕು ಸಹಾಯಕ ಶಿಶುಕ್ಷು ಸಲಹೆಗಾರ ರಮೇಶ್ ನಾಯ್ಕ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಐಟಿಐ ಶಿಕ್ಷಣ ಪೂರೈಸಿದ ಕೂಡಲೇ ಶಿಶಿಕ್ಷು ತರಬೇತಿ ಪಡೆದುಕೊಂಡು ಯಾವುದೇ ಸರಕಾರಿ, ಅರೆ ಸರಕಾರಿ ಅಥವಾ ಖಾಸಗಿ ಕಂಪೆನಿಗಳಲ್ಲಿ ಉದ್ಯೋಗಕ್ಕೆ ಹೋಗುವುದು ಉತ್ತಮ ಎಂದು ಸಲಹೆ ನೀಡಿದರು. 


ಐಟಿಐ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ನ್ಯಾಪ್ಸ್ (National Apprenticeship Promotion Scheme- NAPS) ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಾಗ ಅವರಿಗೆ ಆಯ್ದ ಕಂಪೆನಿಗಳಿಂದ ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಅಪ್ರಂಟಿಶಿಪ್ ತರಬೇತಿಗೆ ಅವಕಾಶ ಮಾಡಿಕೊಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಕಂಪೆನಿಗಳಲ್ಲಿ ಶಿಷ್ಯವೇತನ ನೀಡಲಾಗುತ್ತದೆ. ವರ್ಷದ ಕೊನೆಯಲ್ಲಿ ಪರೀಕ್ಷೆ ನಡೆಸಿ ಕೇಂದ್ರ ಸರಕಾರ ನೀಡಲ್ಪಟ್ಟ ಪ್ರಮಾಣಪತ್ರ ನೀಡಲಾಗುವುದು ಎಂದು ಅವರು ತಿಳಿಸಿದರು.

 

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸಂಸ್ಥೆ ಕುರಿತು ಮಾತನಾಡಿದರು.


ಕಿರಿಯ ತರಬೇತಿ ಅಧಿಕಾರಿ ಶೈಲೇಶ್ ಜೆ. ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಸ್ವಾಗತಿಸಿ, ವಂದಿಸಿದರು‌. ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಮಾತನಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top