ಬೆಳ್ತಂಗಡಿ ಶಾಸಕರ ವಿರುದ್ಧ ಎಫ್‌ಐಆರ್‌ಗೆ ಖಂಡನೆ
ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಘಳಿಗೆಯಿಂದ ಈಗಿನವರೆಗೆ ಯಾವ ಒಂದು ಅಭಿವೃದ್ಧಿ ಕಾರ್ಯ ಆಗದೇ ಇದ್ದರು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಲು ಬಿಜೆಪಿಯ ಅಮಾಯಕ ಕಾರ್ಯಕರ್ತರು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲು ಮಾಡುವ ಮೂಲಕ ಬೆದರಿಸುವ ತಂತ್ರವನ್ನು ಅನುಸರಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಆರೋಪಿಸಿದರು.
ಇದರ ಮುಂದುವರೆದ ಭಾಗವಾಗಿಯಾಗಿ ಬಿಜೆಪಿ ಯುವಮೋರ್ಚಾದ ಬೆಳ್ತಂಗಡಿ ಮಂಡಲದ ಅಧ್ಯಕ್ಷರನ್ನು ವಿನಾಕಾರಣ ಬಂಧಿಸಿ, ನಮ್ಮ ರಾಜಕೀಯ ಶಕ್ತಿಯನ್ನು ಕುಗ್ಗಿಸುವ ನಿಟ್ಟಿನಲ್ಲಿ ಪೊಲೀಸರು ಕೈಗೊಂಡಿರುವ ಕ್ರಮವನ್ನು ಬಿಜೆಪಿಯ ಬೆಳ್ತಂಗಡಿ ಶಾಸಕ ಹರೀಶ ಪೂಂಜಾರವರು ಸ್ಟೇಷನ್ನಿನಲ್ಲಿ ಪ್ರಜಾಸತ್ತಾತ್ಮಕ ಮಾದರಿಯಲ್ಲಿ ಒಬ್ಬ ಜನ ಪ್ರತಿನಿಧಿಯಾಗಿ ಅಲ್ಲಿನ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆಗಿರುವ ದೌರ್ಜನ್ಯವನ್ನು ಪ್ರತಿಭಟಿಸಿದಾಗ ಪೂಂಜಾ ಅವರ ಮೇಲೆಯೇ ದೂರು ದಾಖಲು ಮಾಡಿ ಅವರ ಪ್ರತಿಭಟನೆಯನ್ನು ಈ ಮೂಲಕ ಹೊಸಕಿ ಹಾಕುವ ಧೂರ್ತ ಪ್ರಯತ್ನಕ್ಕೆ ಸರಕಾರಿ ಯಂತ್ರವನ್ನು ಬಳಸಿಕೊಂಡದ್ದು ಇವರ ದ್ವೇಷ ರಾಜಕಾರಣಕ್ಕೆ ಮತ್ತೊಂದು ಉದಾಹರಣೆ ಆಗಿದೆ. ಕಾಂಗ್ರೆಸ್ ಸರಕಾರದ ಈ ಹೇಯ ಕೃತ್ಯಗಳನ್ನು ದಕ್ಷಿಣ ಕನ್ನಡ ಬಿ.ಜೆ.ಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಸತೀಶ್ ಕುಂಪಲ ಹೇಳಿದರು.
ಈ ಹಿಂದೆ ಬಿಜೆಪಿಯ ಕರಾವಳಿಯ ಶಾಸಕರಾದ ಡಿ. ವೇದವ್ಯಾಸ ಕಾಮತ್ ಮತ್ತು ಡಾ. ಭರತ್ ಶೆಟ್ಟಿಯವರ ಮೇಲೆಯೂ ಸುಳ್ಳು ಎಫ್.ಐ.ಆರ್. ಅನ್ನು ದಾಖಲಿಸುವ ಮೂಲಕ ಪೋಲಿಸ್ ಇಲಾಖೆಯನ್ನು ಈ ಸರಕಾರ ದುರ್ಬಳಕೆ ಮಾಡಿಕೊಂಡಿತ್ತು. ಬಿಜೆಪಿಯ ಅಮಾಯಕ ಕಾರ್ಯಕರ್ತರ ಹಾಗೂ ಶಾಸಕರ ಮೇಲೆ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ದೌರ್ಜನ್ಯದ ವಿರುದ್ದ ಧಿಕ್ಕಾರ ಹಾಕುವ ಮೂಲಕ ಬೆಳ್ತಂಗಡಿ ಕ್ಷೇತ್ರದಲ್ಲಿ ಈಗಾಗಲೆ ಪ್ರತಿಭಟನೆ ನಡೆಸಲಾಗಿದೆ. ಇದಕ್ಕೆ ಸರಿಯಾಗಿ ಸ್ಪಂದಿಸದೇ ಮತ್ತೊಮ್ಮೆ ಇಂತಹ ತಪ್ಪುಗಳನ್ನು ಮಾಡುತ್ತಾ ತಮ್ಮ ಮೊಂಡುತನವನ್ನು ಮುಂದುವರೆಸಿದ್ದೇ ಆದಲ್ಲಿ ಜಿಲ್ಲೆಯಾದ್ಯಂತ ತೀವ್ರ ಹೋರಾಟಕ್ಕೆ ಮುಂದಿನ ದಿನದಲ್ಲಿ ಕರೆ ನೀಡುತ್ತೇವೆ ಎಂದು ಕುಂಪಲ ಎಚ್ಚರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ