ಕುದ್ರೆಬೆಟ್ಟು ದೈವಸ್ಥಾನ- ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ

Upayuktha
0

ಬಂಟ್ವಾಳ: ಕಲ್ಲಡ್ಕ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀ ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ. ಬಂಟ್ವಾಳ ತಾಲೂಕಿನ ಬಾಲ್ತಿಲ ಗ್ರಾಮದ ಕುದ್ರಬೆಟ್ಟು ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ದಕ್ಷಿಣ ಭಾಗದ ಗುಡ್ಡಗಳ ನಡುವೆ ಹಚ್ಚ ಹಸುರಿನ ಮೇರು ವೃಕ್ಷಗಳಿಂದ ನಯನಮನೋಹರ ರಮ್ಯ ಪರಿಸರದ ನಡುವೆ ಕಂಗೊಳಿಸುತ್ತಿರುವ ಊರಿನ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಶ್ರದ್ಧಾ ಭಕ್ತಿಯ ಕೇಂದ್ರ ಶ್ರೀ ಮಣಿಕಂಠ ಮಂದಿರದ ವಠಾರದಲ್ಲಿರುವ ಸಾನಿಧ್ಯವೇ "ಶ್ರೀ ಕಲ್ಲುರ್ಟಿ ದೈವಸ್ಥಾನ ಕುದ್ರೆಬೆಟ್ಟು".


ಯಾವುದೇ ಜಾತಿ ಮತ ಭೇದವಿಲ್ಲದೆ ಶ್ರದ್ಧಾ ಭಕ್ತಿಯಿಂದ ತಾಯಿ ಕಲ್ಲುರ್ಟಿಯಲ್ಲಿ ಪ್ರಾರ್ಥಿಸಿದರೆ ಭಕ್ತರ ಅಭೀಷ್ಟೆ ಇಷ್ಟಾರ್ಥಗಳು ಕ್ಷಣಮಾತ್ರದಲ್ಲಿ ಈಡೇರುವ ಈ ಸಾನಿಧ್ಯದಲ್ಲಿ ದಿನೇ ದಿನೇ ಹರಕೆ ಸೇವೆಗಳು, ಅಗೆಲು ಸೇವೆಗಳ ಸಂಖ್ಯೆ ಗಣನೀಯವಾಗಿ ಏರುತ್ತಿವೆ.


ಸುಮಾರು 15 ವರ್ಷಗಳ ಹಿಂದೆ ಈ ಸಾನಿಧ್ಯದ ಪ್ರತಿಷ್ಠಾ ಕಾರ್ಯಗಳು ನಡೆದಿದ್ದು, ಶಿಥಿಲ ಅವಸ್ಥೆಯಲ್ಲಿರುವ ಈ ಸಾನಿಧ್ಯವನ್ನು ಊರ ಪರ ಊರ ಭಗವತ್ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರ ಮಾಡಲು ನಿರ್ಧರಿಸಲಾಗಿತ್ತು. ಅದರಂತೆ, ಜನಶಕ್ತಿ ಸೇವಾ ಟ್ರಸ್ಟ್ (ರಿ )ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ (ರಿ) ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಜವಾಬ್ದಾರಿಯನ್ನು ವಹಿಸಿಕೊಂಡು ಇದೀಗ ಕೇವಲ ಒಂದೇ ತಿಂಗಳ ಅವಧಿಯಲ್ಲಿ ನೂತನ ಸಾನಿಧ್ಯ ನಿರ್ಮಿಸಲಾಗಿದೆ.


ಮಂದಿರದ ಪುನಃ ಪ್ರತಿಷ್ಠಾ ಮಹೋತ್ಸವ ಇಂದು (ಶುಕ್ರವಾರ ಮೇ 3) ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಶ್ರೀ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀ ಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top