ಬೈಂದೂರು: ಬಿಜೆಪಿ ಬೃಹತ್ ರೋಡ್‌ ಶೋನಲ್ಲಿ ಶಾಸಕ ವೇದವ್ಯಾಸ ಕಾಮತ್ ಭಾಗಿ

Upayuktha
0

ಮಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್ ರವರು ಭಾಗವಹಿಸಿದರು.


ಸಿದ್ದಾಪುರ ಹೈಸ್ಕೂಲಿನಿಂದ ಆರಂಭವಾದ ಬೃಹತ್ ರೋಡ್ ಶೋ ಹಾಗೂ ಸರ್ಕಲ್ ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ  ಬಿ.ವೈ ರಾಘವೇಂದ್ರ ರವರ ಪರ ಮತಯಾಚನೆ ನಡೆಸಿದ ಅವರು, ಇಲ್ಲಿ ನೆರೆದಿರುವ ಕಾರ್ಯಕರ್ತರ ಉತ್ಸಾಹ ನೋಡಿದರೆ ಈ ಬಾರಿಯೂ ಬಿಜೆಪಿ ಇಲ್ಲಿ ಸ್ಪಷ್ಟ ಮುನ್ನಡೆ ಸಾಧಿಸಿ ಪ್ರಚಂಡ ವಿಜಯಕ್ಕೆ ಮುನ್ನುಡಿ ಬರೆಯುವುದು ಶತಃಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಶಾಸಕರುಗಳಾದ ಯಶ್ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ಕಿರಣ್ ಕೂಡ್ಗಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್, ದ ಕ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಅರುಣ್ ಕುಮಾರ್ ಪುತ್ತಿಲ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top