ಚಿಕ್ಕಬಳ್ಳಾಪುರ: ಇಂದು ಭಾವೈಕ್ಯ ಯುವಜನ ಸಂಘ ಚಿಕ್ಕಬಳ್ಳಾಪುರ, ಗ್ರಾಮಾಂತರ ಟ್ರಸ್ಟ್ ಬೆಂಗಳೂರು, ಗ್ರೀನ್ ಥಾಟ್ಸ್ ಫೌಂಡೇಶನ್ ಚಿಕ್ಕಬಳ್ಳಾಪುರ ವತಿಯಿಂದ ಜೂನ್ 5 ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಪ್ರಸ್ತುತ ವ್ಯವಸಾಯ ಪದ್ಧತಿಯಿಂದ ಮಣ್ಣಿನ ಆರೋಗ್ಯ ಮತ್ತು ಜೀವ ವೈವಿಧ್ಯತೆಯ ಮೇಲೆ ಉಂಟಾಗುವ ಪರಿಣಾಮಗಳು/ ಜಾಗತಿಕ ಪರಿಸರ ವ್ಯವಸ್ಥೆಯ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮ ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಯಿತು.
ಇದೇ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧಿಸಿದಂತೆ ಪ್ರಸ್ತುತ ಕಾಲಘಟ್ಟದಲ್ಲಿ ಸುಸ್ಥಿರ ನೀರಿನ ನಿರ್ವಹಣೆಯ ಅಗತ್ಯತೆ /ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಗಿರುವ ಪರಿಣಾಮಕಾರಿ ವಿಧಾನ ಪುನರ್ಬಳಕೆಯೋ /ಜೈವಿಕ ವಿಘಟನೀಯವಾಗಬಲ್ಲ ವಸ್ತುಗಳ ಬಳಕೆಯೋ? ವಿಷಯಗಳ ಕುರಿತು ಭಾಷಣ ಸ್ಪರ್ಧೆಯನ್ನೂ ಆಯೋಜಿಸಲಾಯಿತು. ವಿದ್ಯಾರ್ಥಿನಿಯರು ತುಂಬಾ ಉತ್ಸಾಹದಿಂದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ