ಕ್ರಿಮಿನಲ್‌ಗಳ ಅಟ್ಟಹಾಸ ನಿಲ್ಲಿಸಲಾಗದ ಸರಕಾರ: ಸಿಎಂ ಸಿದ್ದರಾಮಯ್ಯಗೆ ವಿ. ಸುನಿಲ್ ಕುಮಾರ್ ಪ್ರಶ್ನೆಗಳ ಸುರಿಮಳೆ

Upayuktha
0



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸರಣಿ ಪ್ರಶ್ನೆಗಳನ್ನು ಎಸೆದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವ ವಿಚಾರದಲ್ಲಿ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.


ಶಿಕ್ಷಣದ ಪ್ರಮುಖ ಕ್ಷೇತ್ರವಾಗಿರುವ ಮಣಿಪಾಲದಲ್ಲಿ ರಾಜಾರೋಷವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.


ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡೀ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳು ವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್ ಗಳು ವಿಜೃಂಭಿಸು ವಂತಾಗಿದೆ. ಇದು ಗೃಹ ಇಲಾಖೆ ಹಾಗೂ ಗೃಹ ಸಚಿವರ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ. ಸಿದ್ದರಾಮಯ್ಯ ನವರೇ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ನಿಮಗೆ ಸ್ವಾಗತ. ಆದರೆ ಇಲ್ಲಿಂದ ಹೊರಡುವುದಕ್ಕೆ ಮೊದಲು ಕೆಲ ಪ್ರಶ್ನೆಗಳಿಗೆ ಉತ್ತರಿಸಿ ಹೋಗಿ ಎಂದು ಆಗ್ರಹಿಸಿದ್ದಾರೆ.


- ಕಾನೂನು-ಸುವ್ಯವಸ್ಥೆ ಕಾಪಾಡಲಾರದ ಗೃಹ ಸಚಿವರಿಂದ ಎಂದು ರಾಜೀನಾಮೆ ಪಡೆಯುತ್ತೀರಿ?

- ಪೊಲೀಸ್ ಠಾಣೆಯನ್ನು ಆಳುವ ಸರ್ಕಾರದ ಆಳಾಗಿಸಿಕೊಂಡಿರುವುದಕ್ಕೆ ಎಂದು ಮುಕ್ತಾಯ ಹಾಡುತ್ತೀರಿ?

- ಕ್ರಿಮಿನಲ್ ಗಳಿಗೂ ನಿಮ್ಮ ಸರ್ಕಾರಕ್ಕೂ ಒಳ ಒಪ್ಪಂದ ಏರ್ಪಟ್ಟಿದ್ದರೆ ಮಾಸಿಕ ಹಫ್ತಾ ಎಷ್ಟು ನಿಗದಿ ಮಾಡಿದ್ದೀರಿ?

- ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪೊಲೀಸರ ಕೈ ಕಟ್ಟಿ ಹಾಕಿದ್ದೀರಾ?

- ಜನರ ಶಾಂತಿ- ನೆಮ್ಮದಿ ಕಾಪಾಡಲಾರದ ಸರ್ಕಾರ ಅಧಿಕಾರದಲ್ಲಿದ್ದು ಪ್ರಯೋಜನವುಂಟೇ?

- ಕ್ರಿಮಿನಲ್ ಗಳ ಅಟ್ಟಹಾಸ ನಿಲ್ಲಿಸದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಭಯವೇಕೆ?

ಸಿದ್ದರಾಮಯ್ಯನವರೇ ನಿಮಗೊಂದು ನೇರ ಸವಾಲು ಈ ಘಟನೆಗೆ ಕಾರಣವಾದ ಗ್ಯಾಂಗ್ ಸ್ಟರ್‌ಗಳನ್ನು ಎಷ್ಟು ಗಂಟೆಯೊಳಗೆ ಬಲಿ ಹಾಕುತ್ತೀರಿ? ಸಣ್ಣ ಕಾರಣಕ್ಕೆ ಶಾಸಕರನ್ನು ಬಂಧಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ?

ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top