ಜನರ ಪ್ರಾಣವನ್ನು ಪಣಕ್ಕಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್‌ನ ಗ್ಯಾರಂಟಿ: ಕ್ಯಾಪ್ಟನ್ ಬ್ರಿಜೇಶ್ ಚೌಟ

Upayuktha
0


ಮಂಗಳೂರು: ಜನರ ಜೀವ ಉಳಿಸಲು ಹಗಲಿರುಳು ದುಡಿಯುವ ಆಂಬ್ಯುಲೆನ್ಸ್ ಸಿಬ್ಬಂದಿಯ ಜೀವನಕ್ಕೆ ಗ್ಯಾರಂಟಿ ಇಲ್ಲದಿರುವುದು ದುರಂತ. ಸತತ ಮೂರು ತಿಂಗಳಿಂದ ಸಂಬಳ ನೀಡದೆ ಸತಾಯಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಆಡಳಿತ ಕೇವಲ ಪ್ರಚಾರಕಷ್ಟೇ ಸೀಮಿತವಾಗಿದೆ ಎಂದು ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.


ಆಂಬ್ಯುಲೆನ್ಸ್‌ ಸಿಬ್ಬಂದಿಯ ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕ್ಯಾಪ್ಟನ್ ಚೌಟ, ಸಣ್ಣ ಸಮಸ್ಯೆಯಿಂದ ಸಂಬಳ ನೀಡುವಲ್ಲಿ ವಿಳಂಬವಾಗಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುವ ಆರೋಗ್ಯ ಸಚಿವರೇ, ಕನಿಷ್ಠ ಸಂಬಳಕ್ಕೆ ಜೀವದ ಹಂಗು ತೆರೆದು ಕೆಲಸ ಮಾಡುವ ಜೀವ ರಕ್ಷಕ ಆಂಬುಲೆನ್ಸ್ ಸಿಬ್ಬಂದಿಗಳಿಗೆ ಕಳೆದ ಮೂರು ತಿಂಗಳಿಂದ ಸಂಬಳ ನೀಡದಿರುವುದು ಸಣ್ಣ ಸಮಸ್ಯೆಯೆ? ನೀವು ಹೇಳುವಂತಹ ಸಣ್ಣ ಸಮಸ್ಯೆಯನ್ನು ಪರಿಹಾರ ಮಾಡಲು ಇಷ್ಟು ತಿಂಗಳಾದರೂ ಸಾಧ್ಯವಾಗದೇ ಇರುವಾಗ ನಿಮಗೆ ರಾಜ್ಯದ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹಾರ ಮಾಡಲು ಸಾಧ್ಯವಿದೆಯೇ? ಎಂದು ಪ್ರಶ್ನಿಸಿದರು.


ಆಂಬುಲೆನ್ಸ್ ಸೇವೆಯ ವ್ಯತ್ಯಯದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿದರೆ ಅದರ ನೇರ ಹೊಣೆಯನ್ನು ಕಾಂಗ್ರೆಸ್ ಸರ್ಕಾರ ಹೊರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು. ಆಂಬುಲೆನ್ಸ್ ಸಿಬ್ಬಂದಿಗಳ ವೇತನವನ್ನು ಬಿಡುಗಡೆ ಮಾಡುವ ಮೂಲಕ ಮುಷ್ಕರವನ್ನು ಶೀಘ್ರವಾಗಿ ಹಿಂಪಡೆಯುವಂತೆ ನೋಡಿಕೊಳ್ಳಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Advt Slider:
To Top