ಕುಂದಾಪುರ: ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಅಳೆಯುವುದೆಂದರೆ ಬರೇ ಅಂಕಗಳಷ್ಟೇ ಮಾನದಂಡವಾಗ ಬಾರದು. ಶಿಕ್ಷಣ ಮುಗಿಸಿ ಹೊರಗೆ ಬಂದ ವಿದ್ಯಾರ್ಥಿಗಳು ತಮ್ಮ ಕೌಟುಂಬಿಕ ಸಾಮಾಜಿಕ ಬದುಕಿನಲ್ಲಿ ಎಷ್ಟು ಸಂಸ್ಕಾರಯುಕ್ತವಾದ ಸಂಸಾರದ ಸಂಬಂಧಗಳನ್ನು ಮೈಗೂಡಿಸಿಕೊಳ್ಳಲು ಸಮರ್ಥರಾಗಿದ್ದಾರೆ ಅನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಗುಣಮಟ್ಟವನ್ನು ಅಳೆಯುವ ಮಾಪನವಾಗಬೇಕು ಎಂದು ಉಡುಪಿ ಎಂಜಿಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು.
ಅವರು ಬಸ್ರೂರು ಶ್ರೀ ಶಾರದಾ ಕಾಲೇಜಿನ ವಾಷಿ೯ಕ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಬಹುಮುಖ್ಯವಾಗಿ ಗ್ರಾಮೀಣ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಜಗತ್ತನ್ನು ಸಮರ್ಥವಾಗಿ ಎದುರಿಸಿ ನಿಲ್ಲಬೇಕಾದರೆ ರೂಢಿಸಿಕೊಳ್ಳಬೇಕಾದ ಮೂರು ಶಕ್ತಿಗಳೆಂದರೆ- ಇಚ್ಛಾಶಕ್ತಿ; ಕೌಶಲಾಶಕ್ತಿ; ಸಂವಹನ ಶಕ್ತಿ. ಪಠ್ಯದ ಜೊತೆಗೆ ಪಾಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯಿಂದ ತೊಡಗಿಸಿಕೊಂಡಾಗ ಮಾತ್ರ ಇಂತಹ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವೆಂದು ಅವರು ನುಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ವಿಶ್ವಸ್ತ ಮಂಡಳಿ ಅಧ್ಯಕ್ಷ ಕೆ. ಜಯಕರ ಶೆಟ್ಟಿ ವಹಿಸಿದ್ದರು.
ಕಾಲೇಜಿನ ಸಂಚಾಲಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಲೇಜು ವಿಶ್ವಸ್ತ ಮಂಡಳಿ ಸದಸ್ಯೆ ಅನುಪಮ ಎಸ್ ಶೆಟ್ಟಿ; ಕಾಲೇಜಿನ ಹಳೆ ವಿದ್ಯಾರ್ಥಿ ಅಶೇೂಕ ಪುಾಜಾರಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜನ ಸೇವಾ ಸಹಕಾರಿ ಸಂಘ ಬಸ್ರೂರು, ಪದವಿ ಪೂವ೯ ಪ್ರಾಂಶುಪಾಲ ನಾರಾಯಣ ಪೈ;ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜು ಪ್ರಾಂಶುಪಾಲೆ ಡಾ.ಚಂದ್ರಾವತಿ ಶೆಟ್ಟಿ ವರದಿ ವಾಚಿಸಿದರು. ನಿವೃತ್ತ ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕ ಪ್ರೊ. ಪುರುಷೇೂತ್ತಮ ಬಲ್ಯಾಯರನ್ನು ಸಂಮಾನಿಸಿ ಗೌರವಿಸಲಾಯಿತು. ಇತಿಹಾಸ ವಿಭಾಗದ ಮುಖ್ಯಸ್ಥ ರಾಘವೇಂದ್ರ ಶೆಟ್ಟಿ ವಂದಿಸಿದರು. ಕನ್ನಡ ಉಪನ್ಯಾಸಕಿ ಪ್ರಮೀಳಾ ಇತಿಹಾಸ ಉಪನ್ಯಾಸಕಿ ಆಶಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ