ವಸಂತ ಬಂಗೇರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Upayuktha
0


ಧರ್ಮಸ್ಥಳ: ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.


ಈ ಕುರಿತು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಅವರು, ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರು. ಸಾಮಾನ್ಯ ಜನರೊಳಗೆ ಹಾಗೂ ಕುಟುಂಬದಲ್ಲಿ ವಿಚಾರ-ಬೇಧಗಳು ಬಂದಾಗ ನಮ್ಮ ತುಳುನಾಡಿನಲ್ಲಿ ಹೇಳುವಂತೆ ಪಂಚಾಯಿತಿಕೆ ಅಂದರೆ ಒಗ್ಗೂಡಿಸುವಿಕೆಗೆ ಪ್ರಯತ್ನ ಮಾಡುತ್ತಿದ್ದರು. ಅವರ ಈ ಹವ್ಯಾಸದಿಂದ ಅವರಿಗೆ ಎಷ್ಟೇ ಕಷ್ಟವಾದರೂ ಸಮಾಜದ ಅನೇಕ ಕುಟುಂಬಗಳನ್ನು ಒಗ್ಗೂಡಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಅವರ ಈ ಸಾಧನೆಯಿಂದಾಗಿ ಸಮಾಜದಲ್ಲಿರುವ ಬಿರುಕು ಬಿಟ್ಟ ಅನೇಕ ಕುಟುಂಬಗಳು ಒಟ್ಟಾಗುತ್ತಿದ್ದವು ಎಂದು ಸ್ಮರಿಸಿಕೊಂಡಿದ್ದಾರೆ.


ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೆಗ್ಗಡೆಯವರು ಪ್ರಾರ್ಥಿಸಿದ್ದಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top