ಪಾಲ್ತಾಡಿ ರಾಮಕೃಷ್ಣ ಆಚಾರ್ಯರ ನಿಧನಕ್ಕೆ ಹೆಗ್ಗಡೆ ಸಂತಾಪ

Upayuktha
0


ಧರ್ಮಸ್ಥಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ನಿಧನಕ್ಕೆ ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಅವರು, ಪಾಲ್ತಾಡಿ ರಾಮಕೃಷ್ಣ ಆಚಾರ್ಯರು ಸ್ವರ್ಗಸ್ಥರಾದ ವಿಚಾರ ತಿಳಿದು ಖೇದವಾಯಿತು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದು, ತುಳುವಿನ ಜಾನಪದ ಶಬ್ದಗಳನ್ನು ಹುಡುಕಿ ತುಳುವಿನ ಕಾರ್ಯಕ್ರಮಗಳಲ್ಲಿ ಅಧಿಕೃತವಾಗಿ ಉಪಯೋಗಿಸುವ ಕಲೆಯನ್ನು ಹೊಂದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ನೇತೃತ್ವದಲ್ಲಿ ಉಜಿರೆಯಲ್ಲಿ ನಡೆದ ವಿಶ್ವ ತುಳುಸಮ್ಮೇಳನದಲ್ಲಿ ಅತ್ಯಂತ ಮುತುವರ್ಜಿ ವಹಿಸಿ ಪಾಲ್ಗೊಂಡು ಸಮ್ಮೇಳನದ ಯಶಸ್ವಿಗಾಗಿ ಶ್ರಮಿಸಿರುತ್ತಾರೆ. ತುಳು ಸಾಹಿತ್ಯ ಹಾಗೂ ಭಾಷೆಯ ಬೆಳವಣಿಗೆಯಲ್ಲಿ ಇವರ ಪಾತ್ರ ಹಿರಿದಾಗಿದೆ. ತುಳುವಿನಲ್ಲಿ ಅತಿ ಹೆಚ್ಚಿನ ಕೃತಿಗಳನ್ನು ಪ್ರಕಟಿಸಿ ತುಳು ಮಾತೆಯ ಸೇವೆಯನ್ನು ಮಾಡಿರುತ್ತಾರೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಲ್ಲಿ ಸರಕಾರದ ಗಮನ ಸೆಳೆದಿರುತ್ತಾರೆ. ಅವರ ನಿಧನ ತುಳು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದು ಅವರು ಹೇಳಿದ್ದಾರೆ.


ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು  ಹೆಗ್ಗಡೆಯವರು ಪ್ರಾರ್ಥಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top