ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಹಿರಿಯ ಜಾನಪದ ವಿದ್ವಾಂಸ ಸಾಹಿತಿ, ಶಿಕ್ಷಕ ಡಾ. ರಾಮಕೃಷ್ಣ ಆಚಾರ್ ನಿಧನಕ್ಕೆ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮೂರನೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅವರು, ಪುತ್ತೂರು ತಾಲೂಕು 10ನೆ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಮ್ಮೇಳನವನ್ನು ಯಶಸ್ವಿಗೊಳಿಸಿದ್ದರು.
ಇವರು ಸಾಹಿತ್ಯಲೋಕಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಮೃತರ ಆತ್ಮಕ್ಕೆ ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿರಶಾಂತಿ ಕೋರುತ್ತದೆ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಸಂದೇಶದಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ