ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ "ತಾರಿಣಿ" ಚಿತ್ರಕ್ಕೆ ಒಲಿದ ಪ್ರಶಸ್ತಿ.

Upayuktha
0


ಪ್ರತಿಷ್ಠಿತ ಚಲನಚಿತ್ರೋತ್ಸವಗಳಲೊಂದಾದ "ದಾದಾ ಸಾಹೇಬ್ ಫಾಲ್ಕೆ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್" ನಲ್ಲಿ ಫೀಚರ್ ಫಿಲ್ಮ್ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ ಎಂದು ತಾರಿಣಿ ಚಿತ್ರದ ನಿರ್ದೇಶಕ 'ಸಿದ್ದು ಪೂರ್ಣಚಂದ್ರ' ರವರು ಸಂತಸ ವ್ಯಕ್ತಪಡಿಸಿದರು. ಇಂತಹ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಳ್ಳುವುದೂ ಕೂಡ ಹೆಮ್ಮೆಯ ವಿಚಾರ, ನಾನು ಒಂದಷ್ಟು ಗುಣಮಟ್ಟವಿರುವ, ಜನಮನ್ನಣೆ ಪಡೆದ ಮತ್ತು  ಐತಿಹಾಸಿಕ ಹಿನ್ನೆಲೆ ಇರುವ ಚಲನಚಿತ್ರೋತ್ಸವಗಳಿಗೆ ಮಾತ್ರ ತಾರಿಣಿ ಚಿತ್ರವನ್ನು ಕಳುಹಿಸಿದ್ದೇನೆ. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟವಾದ ವಿಚಾರ ತಿಳಿಯುತ್ತಿದ್ದಂತೆ ಇಡೀ ಚಿತ್ರತಂಡ ಸಿಹಿ ಹಂಚಿ ಸಂಭ್ರಮಪಟ್ಟಿತು. 


'ಸಿದ್ದು ಪೂರ್ಣಚಂದ್ರ' ರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಆಯ್ಕೆಯಾಗಿ ಪ್ರದರ್ಶನಗೊಂಡು ಪ್ರಶಸ್ತಿಗಳಿಸುತ್ತಿದೆ. "ಶ್ರೀ ಗಜನಿ ಪ್ರೊಡಕ್ಷನ್ಸ್" ಬ್ಯಾನರ್ ನ ಅಡಿಯಲ್ಲಿ ನಿರ್ಮಾಣವಾದ ಈ ಚಿತ್ರಕ್ಕೆ "ಡಾ. ಸುರೇಶ್ ಕೋಟ್ಯಾನ್ ಚಿತ್ರಾಪು" ರವರು ಬಂಡವಾಳ ಹೂಡಿ ಒಂದು ಮುಖ್ಯ ಪಾತ್ರದಲ್ಲೂ ಅಭಿನಯಿಸಿದ್ದಾರೆ. 


 ಗರ್ಭಿಣಿಯೊಬ್ಬಳ ಕಥೆಯಾದಾರಿತ ಈ ಸಿನಿಮಾಗೆ ನಾಯಕಿಯಾಗಿ "ಮಮತಾ ರಾಹುತ್" ರವರು    ಮನೋಜ್ಞವಾಗಿ ಅಭಿನಯಿದ್ದಾರೆ. ಅವರು ಗರ್ಭಿಣಿಯಾದ 7ನೇ ತಿಂಗಳಿಂದ ಚಿತ್ರೀಕರಣ ಪ್ರಾರಂಭಿಸಿ ಒಂಬತ್ತನೇ ತಿಂಗಳು ತುಂಬಿದಾಗಲೂ ಚಿತ್ರೀಕರಣ ಮಾಡುತ್ತಲೇ ಇದ್ದು. ಮಗು ಹುಟ್ಟುವ ಸನ್ನಿವೇಶಗಳನ್ನು ಚಿತ್ರೀಕರಿಸುವಾಗ ಅವರದೇ ಮಗುವನ್ನು ಚಿತ್ರಿಸಿಕೊಂಡಿದ್ದು  ಬೆಸ್ಟ್ ಮೆಮೊರಿ ಆಗಿದೆ. ನೈಜತೆಗೆ ಒತ್ತು ನೀಡುವುದು ಮುಖ್ಯ ಉದ್ದೇಶವಾಗಿ ಎಲ್ಲವೂ ಸಹಜ ಎನಿಸಲು ಸಹಕಾರಿಯಾಗಿದೆ.


 ರಾಜಸ್ಥಾನ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ನಲ್ಲಿ 'ಅತ್ಯುತ್ತಮ ನಟಿ' ಮತ್ತು ಬೆಸ್ಟ್ ಕ್ರಿಟಿಕ್ಸ್ ಅವಾರ್ಡ್,  ಅಯೋಧ್ಯ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಸಾಮಾಜಿಕ ಚಿತ್ರ ಪ್ರಶಸ್ತಿ, ಲಂಡನ್ ಇಂಡಿಪೆಂಡೆಂಟ್ ಫಿಲ್ಮ್ ಅವಾರ್ಡ್, ಬಾಲಿವುಡ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಇಂಡೋಗ್ಮಾ ಫೆಸ್ಟಿವಲ್  ಅವಾರ್ಡ್, ಫ್ರಾನ್ಸ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಗೋಲ್ಡನ್ ಜ್ಯೂರಿ  ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಉತ್ತರ ಪ್ರದೇಶದ ಗ್ಲೋಬಲ್ ತಾಜ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಮೊಕ್ಖೋ ಇಂಟರ್ನ್ಯಾಷನಲ್ ಫಿಲ್ಮ್ ಅವಾರ್ಡ್, ಮಧ್ಯಪ್ರದೇಶದ ವಿಂಧ್ಯ  ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಮುಂಬೈ ಇಂಡಿಪೆಂಡೆಂಟ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ನ್ಯೂಯಾರ್ಕ್ ಫಿಲ್ಮ್ ಅವಾರ್ಡ್  ಚಲನಚಿತ್ರಗಳಲ್ಲಿ ಪ್ರದರ್ಶನಗೊಂಡು ತಾರಿಣಿ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.


 ನಾಯಕನಾಗಿ "ರೋಹಿತ್" ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಿ ಅಭಿನಯಿಸಿದ್ದಾರೆ. ಮುಖ್ಯ ಪಾತ್ರದಲ್ಲಿ ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ವಿಜಯಲಕ್ಷ್ಮಿ, ಪ್ರಮಿಳಾ ಸುಬ್ರಹ್ಮಣ್ಯ, ಸನ್ನಿ, ಶೀಬಾ, ದೀಪಿಕಾ  ಗೌಡ, ಕವಿತ ಕಂಬಾರ್, ಮಟಿಲ್ಢಾ ಡಿಸೋಜಾ,ತೇಜಸ್ವಿನಿ, ಅರ್ಚನ ಗಾಯಕ್ವಾಡ್, ಮಂಜು ನಂಜನಗೂಡು, ರಘು ಸಮರ್ಥ್, ಪ್ರಿನ್ಸ್ ಜಿತಿನ್ ಕೋಟ್ಯಾನ್, ಬೇಬಿ ರಿಧಿ, ಬೇಬಿ ನಿಶಿತಾ,ಚೈತ್ರ, ಶ್ವೇತ  ಅಭಿನಯಿಸಿದ್ದಾರೆ.


ಹಾಸನ ಜಿಲ್ಲೆಯವರಾದ ನಿದೇ೯ಶಕ ಸಿದ್ಧು  ಪೂರ್ಣಚಂದ್ರ ಅವರ ಈ ಸಾಧನೆಗೆ ಸಾಹಿತಿ ಗೊರೂರು ಅನಂತರಾಜು ಅಭಿನಂದಿಸಿ ಶುಭ ಹಾರೈಸಿದ್ಧಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top