ಚಿತ್ರ: ಮಂಗಳವಾರ ಪೂರ್ವಾಹ್ನ ತೋರಣಮುಹೂರ್ತ ಕಾರ್ಯಕ್ರಮದೊಂದಿಗೆ ವಾರ್ಷಿಕೋತ್ಸವ ಶುಭಾರಂಭಗೊಂಡಿತು.
ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಮಂಗಳವಾರ ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು.
ಇಂದಿನ ಕಾರ್ಯಕ್ರಮ: ಇಂದು ಬುಧವಾರ ವಾಸ್ತುಪೂಜಾವಿಧಾನ, ಜಿನಸಹಸ್ರನಾಮ ಪುಷ್ಪಾರ್ಚನೆ, ಷೋಡಶಕಲಶಾಭಿಷೇಕ, ನವಗ್ರಹ ಮಹಾಶಾಂತಿ, ಮಹಾಮಂಗಳಾರತಿ ಮೊದಲಾದ ಕಾರ್ಯಕ್ರಮಗಳು ನಡೆಯುತ್ತವೆ.
ನಾಳೆ ಗುರುವಾರ ಅಪರಾಹ್ನ ಗಂಟೆ 2.30 ರಿಂದ ಮಹಾಮಾತೆ ಶ್ರೀಪದ್ಮಾವತಿ ಅಮ್ಮನವರ ಆರಾಧನೆ, ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ, ಭವ್ಯ ಅಗ್ರೋದಕಮೆರವಣಿಗೆ ಮತ್ತು ಉತ್ಸವ ಸಹಿತ ಭಗವಾನ್ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ