ಯಕ್ಷಗಾನ ಕಲಾವಿದ ಪುತ್ತೂರು ಗಂಗಾಧರ ನಿಧನಕ್ಕೆ ಹೆಗ್ಗಡೆ ಸಂತಾಪ

Upayuktha
0



ಧರ್ಮಸ್ಥಳ: ನಮ್ಮ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಪ್ರತಿಭಾವಂತ ಕಲಾವಿದರಾದ ಪುತ್ತೂರು ಗಂಗಾಧರರವರು ಹೃದಯಾಘಾತದಿಂದ ನಿಧನರಾದ ವಿಚಾರ ತಿಳಿದು ಆಘಾತವಾಯಿತು ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.


ತನ್ನ 14ನೇ ವಯಸ್ಸಿನಲ್ಲಿ ಕ್ಷೇತ್ರದಲ್ಲಿರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಯಾಗಿ ಸೇರಿದ ಅವರು ವಿದ್ಯಾರ್ಜನೆ ಮುಗಿದ ಬಳಿಕ ನಮ್ಮ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಕಲಾವಿದರಾಗಿ 42 ವರ್ಷಗಳ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಹಾಸ್ಯದಿಂದ ಪ್ರಾರಂಭಿಸಿ ರಾಜನ ಪಾತ್ರದವರೆಗೆ ಎಲ್ಲಾ ತರಹದ ವೇಷವನ್ನು ಮಾಡಬಲ್ಲ ಸಮರ್ಥ ಕಲಾವಿದರಾಗಿದ್ದರು.


ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ಉಂಟಾದ ದು:ಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top