ಪ್ರಕೃತಿಯನ್ನು ಸ್ವಚ್ಛವಾಗಿಟ್ಟುಕೊಂಡರೆ ನಮ್ಮನ್ನು ಸದಾ ರಕ್ಷಿಸುತ್ತದೆ: ಡಿ. ವೀರೇಂದ್ರ ಹೆಗ್ಗಡೆ

Upayuktha
0

ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಯ



ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.


ಉಜಿರೆ: ಸುಂದರ, ಪ್ರಶಾಂತ ಪ್ರಕೃತಿಯನ್ನು ನಾವೆಲ್ಲರೂ ಪ್ರೀತಿಸಿ, ಸ್ವಚ್ಛತೆಯನ್ನು ಕಾಪಾಡಿದರೆ ಪ್ರಕೃತಿ ಸದಾ ನಮ್ಮನ್ನು ಉತ್ತಮ ಆರೋಗ್ಯ ಭಾಗ್ಯದೊಂದಿಗೆ ರಕ್ಷಣೆ ಮಾಡುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಬುಧವಾರ ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟ ಮತ್ತು ಧರ್ಮಸ್ಥಳದ ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ಸೇವಾಕರ್ತರ ಸೇವೆಯನ್ನು ಶ್ಲಾಘಿಸಿ ಅಭಿನಂದಿಸಿದರು.


ಶುದ್ಧವಾದ ಗಾಳಿ, ನೀರು ಮತ್ತು ಪ್ರಶಾಂತ ಪ್ರಾಕೃತಿಕಪರಿಸರದಿಂದ ನಾವು ಉತ್ತಮ ಆರೋಗ್ಯಭಾಗ್ಯವನ್ನು ಹೊಂದಬಹುದು. ಸೇವಾಮನೋಭಾವದಿಂದ ಸಂಪಾದಿಸಿದ ಪುಣ್ಯ ಶಾಶ್ವತವಾಗಿರುತ್ತದೆ. ದೇವರಿಗೆ ಪ್ರಿಯವಾದ ಸೇವೆ ಮಾಡುವುದರಿಂದ ಆತ್ಮತೃಪ್ತಿ ಮತ್ತು ಸಂತೋಷ ಸಿಗುತ್ತದೆ ಎಂದು ಹೆಗ್ಗಡೆಯವರು ಹೇಳಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ``ಶೌರ್ಯ’’ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಸಾರ್ವಜನಿಕರು, ಭಕ್ತರು ಹಾಗೂ ಗ್ರಾಮಸ್ಥರು ಬುಧವಾರ ಬೆಳಿಗ್ಯೆ ಗಂಟೆ 9 ರಿಂದ 12 ರ ವರೆಗೆ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top