ತೆಂಕನಿಡಿಯೂರು ಕಾಲೇಜಿನಲ್ಲಿ ನೂತನ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Upayuktha
0


ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಂಡಿರುವ ಡಿಜಿಟಲ್ ಗ್ರಂಥಾಲಯವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಉದ್ಘಾಟಿಸಿದರು.


ಡಿಜಿಟಲ್ ಗ್ರಂಥಾಲವು ಇಂದಿನ ಸ್ಪರ್ಧಾತ್ಮಕ ಕಾಲಘಟ್ಟಕ್ಕೆ ಅತ್ಯಮೂಲ್ಯವಾಗಿದ್ದು, ಇದು 3000 ಕ್ಕೂ ಹೆಚ್ಚಿನ ಕಲಿಕಾ ಪುಸ್ತಕಗಳು, 100ಕ್ಕೂ ಅಧಿಕ ಮ್ಯಾಗಝಿನ್‌ಗಳು ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಅನುಕೂಲವಾಗುವ ಪುಸ್ತಕಗಳನ್ನು ಒಳಗೊಂಡಿದೆ ಎಂದು ಅವರು ತಿಳಿಸಿದರು.


ಈ ಸಂದರ್ಭದಲ್ಲಿ ಎಡ್ವೈಸ್ ಸಂಸ್ಥಾಪಕ  ಧೀರಜ್ ಮಂಗಳೂರು, ಗ್ರಂಥಪಾಲರಾದ ಕೃಷ್ಣ ಸಾಸ್ತಾನ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ  ರಾಧಾಕೃಷ್ಣ ಹಾಗೂ ಡಾ. ರಾಘವ ನಾಯ್ಕ, ಶೈಕಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ., ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ ಹಾಗೂ ಬೋಧಕ/ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ  ಪ್ರಶಾಂತ ಎನ್. ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top