ವಿದ್ಯಾರ್ಥಿ ಜೀವನದಲ್ಲಿ ಕ್ರಿಯಾತ್ಮಕ ಸೃಜನಶೀಲತೆ ಬಹು ಮುಖ್ಯ: ಪ್ರೊ ವಿಷ್ಣುಗಣಪತಿ ಭಟ್

Upayuktha
0


ಪುತ್ತೂರು: ಭವಿಷ್ಯ ಸುಭದ್ರವಾಗಿರಬೇಕಾದರೆ ವಿದ್ಯಾರ್ಥಿ ಜೀವನದಲ್ಲೇ ಕೌಶಲ್ಯಗಳನ್ನು ಉತ್ತಮಗೊಳಿಸುವುದಕ್ಕೆ ಪ್ರಯತ್ನಿಸಬೇಕು. ಸೃಜನಶೀಲತೆ ಮತ್ತು ಸಕ್ರಿಯತೆಗಳ ಮೂಲಕ ಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ. ಹಾಗಾಗಿ ವಿದ್ಯಾರ್ಥಿ ಜೀವನದಲ್ಲಿ ಲಭಿಸುವ ವಿಪುಲ ಅವಕಾಶಗಳನ್ನು ಬಳಸಿಕೊಂಡರೆ ಮಾತ್ರ ಸಮಾಜದಲ್ಲಿ ಇತರರು ಗುರುತಿಸುವ ರೀತಿಯಲ್ಲಿ ಬೆಳೆಯಬಹುದು ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಅಭಿಪ್ರಾಯಪಟ್ಟರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಮಂಗಳವಾರ (ಮೇ 28) ಆಯೋಜಿಸಿದ ವಿವೇಕ ಶೋಧನ 2024 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಶ್ರೀಧರ ಹೆಚ್ ಜಿ ಮಾತನಾಡಿ, ಪ್ರತಿಯೊಬ್ಬನೂ ತನ್ನೊಳಗಿನ ಶಕ್ತಿಯನ್ನು ಶೋಧಿಸಬೇಕು. ಯಾವಾಗ ನಮ್ಮೊಳಗಿನ ಶಕ್ತಿ ಮತ್ತು ನಿಜವಾದ ಸಂಸ್ಕೃತಿಯನ್ನು ಹುಡುಕುವಲ್ಲಿ ಯಶಸ್ವಿಯಾಗುತ್ತೇವೆಯೋ ಆಗ ನಮಗೆ ಜೀವನದಲ್ಲಿ ಆತ್ಮಾನಂದ ಸಿಗುವುದು ಎಂದರು.


ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಡೀನ್ ಹಾಗು ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯಸರಸ್ವತಿ ಬಿ ಪ್ರಾಸ್ತಾವಿಕ ಮಾತುಗಳನ್ನಾಡಿ ದರು. ವೇದಿಕೆಯಲ್ಲಿ ಕಾಲೇಜಿನ ವಿಶೇಷಾಧಿಕಾರಿ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯ್ಕ್, ವಿವೇಕ ಶೋಧನ 2024 ಕಾರ್ಯಕ್ರಮದ ಸಂಯೋಜಕ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕ ರಾಘವೇಂದ್ರ ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ರಾಕೇಶ್ ಪ್ರಸಾದ್ ಕೆ ಸ್ವಾಗತಿಸಿ, ನಿರಂಜನ್ ಪಿ ವಂದಿಸಿದರು. ಪುಣ್ಯಶ್ರೀ ನಿರೂಪಿಸಿದರು.


ಕಾರ್ಯಕ್ರಮದ ಬಳಿಕ ಪದವಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top