ಮಂಗಳೂರು ವಿವಿ: ಮೇ 21 ರಂದು ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ

Chandrashekhara Kulamarva
0


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಶಿಕ್ಷಕೇತರ ಉದ್ಯೋಗಿಗಳ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಯೆನೆಪೋಯಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ನರಿಂಗಾನ ಇವುಗಳ ಜಂಟಿ ಆಶ್ರಯದಲ್ಲಿ ದಿ.ಮಾಧವ ಸೋಮೇಶ್ವರರ ಜನ್ಮದಿನೋತ್ಸವದ ಪ್ರಯುಕ್ತ ಮಂಗಳವಾರ (ಮೇ 21) ದಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ವಿವಿಯ ಡಾ.ವೀರೇಂದ್ರ ಹೆಗ್ಗಡೆ ಸಭಾಂಗಣದಲ್ಲಿ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದೆ. 


ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಯೆನೆಪೋಯಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಗುರುರಾಜ್ ಹೆಚ್ ಮತ್ತು ಮಂಗಳೂರು ವಿವಿಯ ಕುಲಸಚಿವ ರಾಜು ಮೊಗವೀರ ಭಾಗವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ ಎಲ್ ಧರ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವ (ಪರೀಕ್ಷಾಂಗ) ಪ್ರೊ. ದೇವೇಂದ್ರಪ್ಪ ಹೆಚ್. ಮತ್ತು ಹಣಕಾಸು ಅಧಿಕಾರಿ ಪ್ರೊ. ವೈ. ಸಂಗಪ್ಪ ಮೊದಲಾದವರು ಉಪಸ್ಥಿತರಿರಲಿದ್ದಾರೆ. 


ಶಿಬಿರದಲ್ಲಿ ವಿವಿಧ ರೋಗಗಳಿಗೆ ತಜ್ಞ ವೈದ್ಯರಿಂದ ಉಚಿತ ತಪಾಸಣೆ, ಸೂಕ್ತ ಸಲಹೆ ಹಾಗೂ ಔಷಧಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top