ಸುರತ್ಕಲ್: ಭರತನಾಟ್ಯವು ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಅನಾವರಣಗೊಳಿಸುವ ಕಲೆಯಾಗಿದ್ದು ಸಹಸ್ರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಭರತನಾಟ್ಯದ ಅಭ್ಯಸಿಸುವಿಕೆಯಿಂದ ನಮ್ಮ ಸಂಸ್ಕೃತಿಯ ಅರಿವಿನ ಜೊತೆಗೆ ಮಾನಸಿಕ ಮತ್ತು ದೈಹಿಕ ದೃಢತೆಯನ್ನು ಪಡೆಯಲು ಸಾಧ್ಯ ಎಂದು ಶಾರದಾ ನಾಟ್ಯಾಲಯ, ಸುರತ್ಕಲ್‌ನ ಮುಖ್ಯಸ್ಥೆ ವಿದುಷಿ ಭಾರತಿ ಸುರೇಶ್ ನುಡಿದರು.
ಅವರು ಗೋವಿಂದ ದಾಸ ಕಾಲೇಜಿನ ಯಕ್ಷಗಾನ ಮತ್ತು ಲಲಿತಕಲಾ ಸಂಘ ಹಾಗೂ ಕಲಾಭ್ದಿಯ ಸಹಭಾಗಿತ್ವದಲ್ಲಿ ನಡೆದ ವಿನೂತನ ಕಾರ್ಯಕ್ರಮ ‘ಕಲಿಕಾ’-ಭರತನಾಟ್ಯ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ, ನಿತ್ಯಾನಂದ ರಾವ್ ಮಾತನಾಡಿ ಶೈಕ್ಷಣಿಕ ಸಂಸ್ಥೆಗಳು ಶಾಸ್ತ್ರೀಯ ಕಲೆಗಳಿಗೆ ಹೆಚ್ಚಿನ ಬೆಂಬಲ ನೀಡಿ ಯುವ ಕಲಾವಿದರನ್ನು ಬೆಳೆಸಬೇಕಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ. ಮಾತನಾಡಿ ಗೋವಿಂದ ದಾಸ ಕಾಲೇಜು ಪಠ್ಯದೊಂದಿಗೆ ವಿದ್ಯಾರ್ಥಿಗಳ ಆಸಕ್ತಿಗನುಸಾರವಾಗಿ ಪಠ್ಯೇತರ ಚುವಟಿಕೆಗಳಲ್ಲೂ ಬೆಳೆಯುವಂತೆ ಪ್ರೋತ್ಸಾಹ ನೀಡುತ್ತಿದೆ. ಅನೇಕ ವಿದ್ಯಾರ್ಥಿಗಳು ಪ್ರಬುದ್ಧ ಕಲಾವಿದರಾಗಿ ರೂಪುಗೊಳ್ಳುತ್ತಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ ಎಂದರು.
ಕಾಲೇಜಿನ ವಿದ್ಯಾರ್ಥಿನಿಯರಾದ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಅವರ ಶಿಷ್ಯೆ ಪಲ್ಲವಿ ವಸಂತ್ ಮತ್ತು ವಿದುಷಿ ಅನ್ನಪೂರ್ಣ ರಿತೇಶ್ ಅವರ ಶಿಷ್ಯೆ ಹಿತಾ ಉಮೇಶ್ ಅವರಿಂದ ಭರತನಾಟ್ಯ ಪ್ರದರ್ಶನವು ನಡೆಯಿತು.
ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್‌ನ ಅಧ್ಯಕ್ಷೆ ಡಾ. ಸಾಯಿಗೀತಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್, ಕೆ., ಲಲಿತಕಲಾ ಸಂಘದ ಸಂಯೋಜಕರಾದ ಡಾ. ವಿಜಯಲಕ್ಷ್ಮಿ., ಕುಮಾರ ಮಾದರ, ಸಾಹಿತಿ ಬಾಬು ಪಾಂಗಳ, ಶಿಕ್ಷಕ ರಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯೆ ಸುಮಿತ್ರಾ, ಪದ್ಮಪ್ರಿಯ ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಅಕ್ಷತಾ ವಿ. ಕಾರ್ಯಕ್ರಮ ನಿರೂಪಿಸಿದರು. ಲಲತಕಲಾ ಮತ್ತು ಯಕ್ಷಗಾನ ಕೇಂದ್ರದ ತರಬೇತಿದಾರ ವಿನೋದ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ