ಸುರತ್ಕಲ್: ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದಾಗಿದೆ. ದೇಶದ ಮುಂದಿನ ಜನಾಂಗವಾದ ಯುವಜನರು ಮಾರಕ ರೋಗಗಳ ಹರಡುವಿಕೆಯ ಬಗ್ಗೆ ಮಾಹಿತಿ ಮತ್ತು ಜಾಗೃತಿಯನ್ನು ಹೊಂದಬೇಕು. ಎಂದು ಶ್ರೀನಿವಾಸ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ವೈದ್ಯೆ ಡಾ. ಶಮಿತಾ ಎಸ್. ಶೆಟ್ಟಿ ನುಡಿದರು.
ಅವರು ಗೋವಿಂದ ದಾಸ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕ ಮತ್ತು ಶ್ರೀನಿವಾಸ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಗಳು ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕಿಯರಿಗಾಗಿ ನಡೆದ ಆರೋಗ್ಯ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ ವಿದ್ಯಾರ್ಥಿನಿಯರು ಆರೋಗ್ಯ ಸಮಸ್ಯೆಗಳನ್ನು ಉಪೇಕ್ಷಿಸದೆ ಸೂಕ್ತ ವೈದ್ಯಕೀಯ ಸಲಹೆ ಮತ್ತು ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು ಎಂದರು.
ಡಾ. ದೇವಿಕಾ ಮತ್ತು ಡಾ. ಸುರುಚಿ ವಿವಿಧ ಸೊಂಕುಗಳ ಹರಡುವಿಕೆ ಮತ್ತು ಅವುಗಳನ್ನು ತಡೆಗಟ್ಟುವ ಬಗ್ಗೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್ ಕೆ., ರಾಷ್ಟ್ರೀಯ ಸೇವಾಯೋಜನಾ ಕಾರ್ಯಕ್ರಮಾಧಿಕಾರಿಗಳಾದ ಅಕ್ಷತಾ ವಿ. ಮತ್ತು ಡಾ. ಭಾಗ್ಯಲಕ್ಷ್ಮೀ ಎಂ. ಉಪಸ್ಥಿತರಿದ್ದರು.
ಗೌತಮಿ ಶೆಟ್ಟಿ ಸ್ವಾಗತಿಸಿ ಶ್ರೇಯಲ್ ಬಂಗೇರ ವಂದಿಸಿದರು. ಅನಿಶಾಶ್ರೀ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ