|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗೋವಿಂದ ದಾಸ ಕಾಲೇಜಿನಲ್ಲಿ "ಆರೋಗ್ಯಕರ ಜೀವನ" ಕಾರ್ಯಾಗಾರ

ಗೋವಿಂದ ದಾಸ ಕಾಲೇಜಿನಲ್ಲಿ "ಆರೋಗ್ಯಕರ ಜೀವನ" ಕಾರ್ಯಾಗಾರ



ಸುರತ್ಕಲ್‌: ನಮ್ಮ ಆರೋಗ್ಯ ನಮ್ಮ ಹಕ್ಕು ಆಗಿದ್ದು ತಂಬಾಕು ಮುಕ್ತ ಸಮಾಜಕ್ಕೆ ನಾವೆಲ್ಲರೂ ದುಡಿಯ ಬೇಕಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ ಕರ್ನಾಟಕದಲ್ಲಿ ಶೇ.22.8 ರಷ್ಟು ವಯಸ್ಕರು ತಂಬಾಕು ಸೇವನೆ ಮಾಡುತ್ತಿದ್ದು.


ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಅತೀ ಅಗತ್ಯ. ವಿದ್ಯಾಥಿಗಳು ಜಾಗೃತರಾಗಿ ಇತರರಿಗೂ ಅರಿವು ಮೂಡಿಸುವುದರ ಮೂಲಕ ಸಾಮಾಜಿಕ ಋಣ ಸಲ್ಲಿಸಬೇಕಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಯವರ ಕಛೇರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಪಂಚಾಯತ್ ದ.ಕ ಹಾಗೂ ಗೋವಿಂದ ದಾಸ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಾಲೇಜು ತಂಬಾಕು ನಿಯಂತ್ರಣ ಘಟಕಗಳ ಆಶ್ರಯದಲ್ಲಿ ನಡೆದ ಆರೋಗ್ಯಕರ ಜೀವನ – ಕಾರ್ಯಾಗಾರದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಆಪ್ತ ಸಲಹೆಗಾರ ಪುಂಡಲೀಕ ಲಕಾಡಿ ನುಡಿದರು.


ರಾಷ್ಟ್ರೀಯ ತಂಬಾಕು ನಿಯಂತ್ರಣ ಕರ‍್ಯಕ್ರಮದ ಪ್ರಕಾರ ಸೂಚಕಗಳ ನಿಯಮಗಳನ್ನು ಪಾಲಿಸುವ ಶೈಕ್ಷಣಿಕ ಸಂಸ್ಥೆಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ ಎಂದು ಘೋಷಿಸಲಾಗುತ್ತಿದೆ ಎಂದು ಅವರು ನುಡಿದರು.


ಶ್ರುತಿ ಸಾಲ್ಯಾನ್ ಪ್ರತಿಜ್ಞಾ ವಿಧಿ ಬೋಧಿಸಿದರು.


ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ಕೃಷ್ಣಮೂರ್ತಿ, ಉಪಪ್ರಾಂಶುಪಾಲ ಪ್ರೊ. ನೀಲಪ್ಪ ವಿ., ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ.ಹರೀಶ್ ಆಚಾರ್ಯ,  ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್, ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿಗಳಾದ ಅಕ್ಷತಾ ಶೆಟ್ಟಿ ಮತ್ತು ಡಾ.ಭಾಗ್ಯಲಕ್ಷ್ಮಿ, ಪ್ರಾಧ್ಯಾಪಕ ಕುಮಾರ ಮಾದರ್ ಉಪಸ್ಥಿತರಿದ್ದರು. ಸಂಯೋಜಕ ವೆಂಕಪ್ಪ ಮೂಲ್ಯ ಕರ‍್ಯಕ್ರಮ ಸಂಯೋಜಿಸಿದರು. ತಂಬಾಕು ನಿಯಂತ್ರಣ ಕರ‍್ಯಕ್ರಮಕ್ಕೆ ಸಂಬಂಧಿಸಿದ ಮಾಹಿತಿ ಫಲಕ ಹಾಗೂ ಪುಸ್ತಕಗಳನ್ನು ಕಾಲೇಜು ಘಟಕಕ್ಕೆ ಹಸ್ತ್ತಾಂತರಿಸಲಾಯಿತು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

0 Comments

Post a Comment

Post a Comment (0)

Previous Post Next Post