ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕು ಪಡೆದುಕೊಳ್ಳುತ್ತಿದ್ದಂತೆ ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಬೆಳಿಗ್ಗೆಯಿಂದ ಅವರ ಮನೆಯಲ್ಲಿ ಹೋಮ, ಹವನ ನಡೆದಿದೆ.
ರೇವಣ್ಣ ಪುತ್ರನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸದ್ಯ ಪ್ರಕರಣದ ತನಿಖೆ ಎಸ್‌ಐಟಿಗೆ ವರ್ಗಾವಣೆಯಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕೂಡ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಎಚ್‌ಡಿ ರೇವಣ್ಣ ಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆದವು.
ಪೆನ್‌ಡ್ರೈವ್ ವಿಚಾರ ಹೊರಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ. ಸದ್ಯ ತನಿಖೆಯ ಭಾಗವಾಗಿ ಎಸ್‌ಐಟಿ ಪ್ರಜ್ವಲ್ ರೇವಣ್ಣಾಗೆ ಬುಲಾವ್ ನೋಟೀಸ್ ನೀಡಿದೆ. ಹೀಗಾಗಿ ಮೇ ಮೂರರಂದು ಪ್ರಜ್ವಲ್ ವಾಪಾಸ್ಸಾಗಲಿದ್ದಾರೆ. ಈ ಎಲ್ಲಾ ಬೆಳವಣಿಗಳ ನಡುವೆ ಎಚ್‌ಡಿ ರೇವಣ್ಣ ಅವರಿಗೆ ದೇವರ ಮೇಲೆ ಭಕ್ತಿ ಹೆಚ್ಚಾಗಿದೆ. ಹೀಗಾಗಿ ರೇವಣ್ಣ ಹೊಳೆನರಸೀಪುರದ ಮನೆಯಲ್ಲಿ ಹೋಮ, ಹವನ ನೆರವೇರಿಸಿದ್ದಾರೆ.
ಮನೆಯಲ್ಲಿ ಹೋಮ ಕುಂಡ ನಿರ್ಮಿಸಿ ಹೋಮ-ಹವನ ಮಾತ್ರವಲ್ಲದೆ, ಬೆಳಗ್ಗೆಯಿಂದಲೇ ವಿವಿಧ ಪೂಜೆಯನ್ನೂ ಮಾಡಿಸಿದ್ದಾರೆ. ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಎಚ್‌ಡಿ ರೇವಣ್ಣ ಹೊಳೆನರಸೀಪುರಕ್ಕೆ ಆಗಮಿಸಿದ್ದರು. ಬುಧವಾರ ಮುಂಜಾನೆ ಮಾವಿನ ಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವೇಶ್ವರ, ಲಕ್ಷ್ಮಿ ನರಸಿಂಹ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮನೆಯಲ್ಲಿ ವಿಶೇಷ ಪೂಜೆ ಮಾಡಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ