ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಗೆದ್ದರೂ ಅವರನ್ನು ಜೆಡಿಎಸ್‌ನಿಂದ ಅಮಾನತು ಮಾಡಿರುವ ನಿರ್ಧಾರವನ್ನು ಹಿಂದೆಗೆದುಕೊಳ್ಳದಂತೆ ಪಕ್ಷದ ನಾಯಕರಿಗೆ ನಾವೇ ಮನವಿ ಮಾಡುತ್ತೇವೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಜೆಡಿಎಸ್ ಕೂಡ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಅವರನ್ನು ಪಕ್ಷದಿಂದ ಅಮಾನತುಪಡಿಸಲಾಗಿದೆ ಎಂದರು.
ತನಿಖೆ ಮುಗಿದು ನ್ಯಾಯಾಲಯದ ತೀರ್ಪು ಬರುವರೆಗೂ ಅಮಾನತು ಪ್ರಕರಣನ್ನು ವಾಪಸ್ ಪಡೆಯಬಾರದು. ಈ ನಿಲುವಿನಿಂದ ಕುಮಾರಸ್ವಾಮಿ ಹಿಂದೆ ಸರಿಯಬಾರದೆಂದು ಅಶೋಕ್ ಮನವಿ ಮಾಡಿದರು.
ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನ ಪ್ರಕ್ರಿಯೆ ಕಾನೂನಿನ ಪ್ರಕಾರವೇ ನಡೆದಿದೆ ಎಂದ ಅಶೋಕ್, ಪೊಲೀಸರ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ