ಹೊಸದಿಲ್ಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಅನ್ಯದ್ವೇಷ ಭಾರತದ ಆರ್ಥಿಕತೆಗೆ ಅಡ್ಡಿಯಾಗುತ್ತಿದೆ ಎಂದು ಜೋ ಬೈಡೆನ್ ಹೇಳಿದ್ದರು.
ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಜೈಶಂಕರ್, ಭಾರತ ಯಾವಾಗಲೂ ಮುಕ್ತ ಸಮಾಜವಾಗಿದೆ. ಪ್ರಪಂಚದ ಇತಿಹಾಸದಲ್ಲಿ ಭಾರತವು ಯಾವಾಗಲೂ ಅತ್ಯಂತ ವಿಶಿಷ್ಟವಾದ ದೇಶವಾಗಿದೆ ಮತ್ತು ಅದು ಯಾವಾಗಲೂ ವೈವಿಧ್ಯಮಯ ಸಮಾಜದ ಜನರನ್ನು ಸ್ವಾಗತಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಭಾರತದ ಆರ್ಥಿಕತೆ ಕುಂಠಿತವಾಗುತ್ತಿಲ್ಲ ಎಂದು ಪ್ರತಿಪಾದಿಸಿದರು.
ಭಾರತ ಮತ್ತು ಜಪಾನ್‌ನಲ್ಲಿನ ಅನ್ಯದ್ವೇಷವು ಅವರ ಆರ್ಥಿಕತೆಯ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ ಎಂದು ಯುಎಸ್ ಅಧ್ಯಕ್ಷರು ಇತ್ತೀಚೆಗೆ ಟೀಕಿಸಿದ್ದರು. ಒಡಿಶಾದ ಭುವನೇಶ್ವರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ ಎಸ್ ಜೈಶಂಕರ್, ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯಲ್ಲಿ ಭಾರತದ ವಿದೇಶಾಂಗ ನೀತಿಗೆ ಸಂಬಂಧಿಸಿದಂತೆ ದೊಡ್ಡ ಸುಧಾರಣೆಗಳು ದಾಖಲಾಗಿವೆ. ಭಾರತವು ತನ್ನ ಸ್ಪಷ್ಟ ವಿದೇಶಾಂಗ ನೀತಿಯಿಂದಾಗಿ ವಿವಿಧ ಜಾಗತಿಕ ವಿಷಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಅವರು ಹೇಳಿದರು.
ಇಡೀ ಗಲ್ಫ್ ಪ್ರದೇಶ ಮತ್ತು ಪಶ್ಚಿಮ ಏಷ್ಯಾದ ಕೆಲವು ಭಾಗಗಳು ಯುದ್ಧದ ಪರಿಸ್ಥಿತಿಗಳನ್ನು ಎದುರಿಸುತ್ತಿವೆ ಮತ್ತು ಭಾರತವು ಈ ಪ್ರದೇಶದಲ್ಲಿ ವಾಸಿಸುವ ತನ್ನ 90 ಲಕ್ಷ ನಾಗರಿಕರನ್ನು ರಕ್ಷಿಸುವ ಬಗ್ಗೆ ಕಾಳಜಿ ವಹಿಸುತ್ತಿದೆ ಎಂದು ಜೈಶಂಕರ್ ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ