ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Upayuktha
0

ಧರ್ಮಸ್ಥಳ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ, ವೃತ್ತಿಯಿಂದ  ನಿವೃತ್ತರಾಗಲಿರುವ ಡಾ. ಎಲ್ ಎಚ್ ಮಂಜುನಾಥರವರನ್ನು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಸನ್ಮಾನಿಸಲಾಯಿತು. 


ಸನ್ಮಾನವನ್ನು ನೆರವೇರಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥರು ಮಾತನಾಡುತ್ತಾ, ಡಾ. ಎಲ್ ಎಚ್ ಮಂಜುನಾಥರವರು ಓರ್ವ ಉತ್ತಮ ಓದುಗರೂ ಬರಹಗಾರರೂ ಆಗಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ, ಬೆಳ್ತಂಗಡಿ ತಾಲೂಕಿನಿಂದ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅತಿ ಹೆಚ್ಚು ಆಜೀವ ಸದಸ್ಯರಾಗಿ ನೋಂದಣಿಯಾಗುವಲ್ಲಿ ಕಾರಣರಾದವರು. ಅಲ್ಲದೆ ತಾಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜನೆಗೆ ಮಾರ್ಗದರ್ಶನದೊಂದಿಗೆ ಸಹಕಾರ ನೀಡಿದವರು. ಇವರ ಸಾಮಾಜಿಕ ಮತ್ತು ಸಾಹಿತ್ಯಕ ಸೇವೆ ನಿರಂತರವಾಗಿರಲಿ ಎಂದು ಶುಭ ಹಾರೈಸಿದರು. 


ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ತಾಲೂಕಿನ ಅಧ್ಯಕ್ಷರಾದ ಡಿ. ಯದುಪತಿ ಗೌಡ, ಗೌರವ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು, ಕೋಶಾಧ್ಯಕ್ಷರಾದ ಡಿ. ಧರ್ಣಪ್ಪ ಮತ್ತು ಉಜಿರೆ ಶ್ರೀ ಧ ಮ ಕಾಲೇಜಿನ ಉಪನ್ಯಾಸಕರಾದ ಡಾ. ಡಿ ಎ ನಾಗಣ್ಣರವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top