ಪಾಣಾಜೆ: 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇಕಡ 100 ಫಲಿತಾಂಶ ಬಂದಿರುತ್ತದೆ. ಪರೀಕ್ಷೆಗೆ ಒಟ್ಟು 25 ವಿದ್ಯಾರ್ಥಿಗಳು ಹಾಜರಾಗಿದ್ದರು. ನಾಲ್ಕು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಅಬ್ದುಲ್ ಕುಂಞಿ ಹಾಗೂ ಬೀಬಿ ಅವರ ಮಗ ಮುಹಮ್ಮದ್ ಅಫ್ಸಲ್ 601 ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ನಾರಾಯಣ ಜಿ ಹಾಗೂ ಲಲಿತಾ ಅವರ ಪುತ್ರಿ ಚೈತನ್ಯ ಜಿ. 594 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಜಯ ಹಾಗೂ ನಳಿನಿ ಅವರ ಪುತ್ರಿ ಗ್ರೀಷ್ಮಾ ಎ 570 ಅಂಕಗಳನ್ನು ಗಳಿಸಿ ಶಾಲೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ ಎಂದು ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ