ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿ ಸಭೆಯು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯದ ಕಾರ್ಯದರ್ಶಿ ಆಗಿರುವಂತಹ ಡಿಎಸ್ ಅರುಣ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹಾಗೂ ಗಣೇಶ್ ಕಾರ್ಣಿಕ್, ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಗಳಾದ ಡಾಕ್ಟರ್ ಧನಂಜಯ ಸರ್ಜಿ, ಚುನಾವಣೆಯ ಪ್ರಭಾರಿ ಹಾಗೂ ಶಾಸಕರಾದ ಹರೀಶ್ ಪೂಂಜ, ಸುಳ್ಯದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ, ಜಿಲ್ಲೆಯ ಸಂಚಾಲಕರಾದ ವಿಕಾಸ್ ಪುತ್ತೂರು ಹಾಗೂ ಡಾಕ್ಟರ್ ಮಂಜುಳ ಅನಿಲ್ ರಾವ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಬಾಲಕೃಷ್ಣ ಭಟ್ ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿದರು. ಯತೀಶ್ ಅರ್ವರ್ ಧನ್ಯವಾದವಿತ್ತರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ