ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್
ಮೂಡುಬಿದಿರೆ: ಎಂಪಿಎಂ ಕಾಲೇಜು ಕಾರ್ಕಳದಲ್ಲಿ ಮುಕ್ತಾಯಗೊಂಡ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಸತತ 19ನೇ ಬಾರಿ ದಿವಂಗತ ಎಂಕೆ ಅನಂತ ರಾಜ್ ಮೆಮೋರಿಯಲ್ ಪರ್ಯಾಯ ಫಲಕವನ್ನು ತನ್ನದಾಗಿಸಿಕೊಂಡಿತು.
ಸೆಮಿಪೈನಲ್ ಹಣಾಹಣಿಯಲ್ಲಿ ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಆಳ್ವಾಸ್ ತಂಡ 35-16,35-13 ನೇರ ಸೆಟ್ ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿತು.
ಪೈನಲ್ ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಶಾಲನಗರ ತಂಡವನ್ನು 35-09,35-04 ನೇರ ಸೆಟ್ ಗಳಿಂದ ಸೋಲಿಸಿ ಸತತ 19ನೇ ಬಾರಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಫ್ ಗೆದ್ದುಕೊಂಡಿತು. ಆಳ್ವಾಸ್‌ನ ಚೇತನ್ ಉತ್ತಮ ದಾಳಿಗಾರ ಹಾಗೂ ನಂದಕುಮಾರ್ ಉತ್ತಮ ರಕ್ಷಣಕಾರ ಪ್ರಶಸ್ತಿಗೆ ಭಾಜನರಾದರು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ