ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಮಂಗಳಗಂಗೋತ್ರಿ ಕೊಣಾಜೆ ಇಲ್ಲಿನ ಪ್ರಥಮ ವರ್ಷದ ಸಮಾಜ ಕಾರ್ಯ ವಿದ್ಯಾರ್ಥಿಗಳ ಸಮಾಜ ಕಾರ್ಯ ಗ್ರಾಮೀಣ ಅಧ್ಯಯನ ಶಿಬಿರವು "ಕಡಲ ಮಕ್ಕಳ ಚಿತ್ತ ಹಾಡಿಯತ್ತ" ಎಂಬ ಧ್ಯೇಯ ವಾಕ್ಯದೊಂದಿಗೆ ಮೇ 22ರಿಂದ 28 ರವರೆಗೆ ಸರಕಾರಿ ಬುಡಕಟ್ಟು ವಾಲ್ಮೀಕಿ ಆಶ್ರಮ ಶಾಲೆ ಬಸವನಗಿರಿ ಹಾಡಿ, ಎಚ್ ಡಿ ಕೋಟೆ ತಾಲೂಕು, ಮೈಸೂರು ಇಲ್ಲಿ ನಡೆಯಲಿದೆ.
ಗ್ರಾಮೀಣ ಜನರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಅಂಶಗಳ ಕುರಿತು ಉಪಯುಕ್ತ ಮಾಹಿತಿ ಮತ್ತು ಜಾಗೃತಿ ಮೂಡಿಸುವ ಮತ್ತು ವಿದ್ಯಾರ್ಥಿಗಳ ಜವಾಬ್ದಾರಿ ಹಂಚಿಕೆ ಮತ್ತು ಕಾರ್ಯಕ್ರಮ ಸಂಯೋಜಿಸುವ ಕೌಶಲ್ಯವನ್ನು ಬೆಳೆಸುವ ದೃಷ್ಟಿಯಿಂದ ಈ ಗ್ರಾಮೀಣ ಅಧ್ಯಯನ ಶಿಬಿರವನ್ನು ಆಯೋಜಿಸಲಾಗಿದೆ.
ಗ್ರಾಮೀಣ ಸಹಭಾಗಿತ್ವ ಸಮೀಕ್ಷೆ, ಉಚಿತ ವೈದ್ಯಕೀಯ ಶಿಬಿರ ಹಾಗೂ ಗ್ರಾಮದ ಜನರಿಗೆ ವಿವಿಧ ಸ್ಪರ್ಧೆಗಳನ್ನು ಹಾಗೂ ಶಿಬಿರದ ಆಸು ಪಾಸಿನಲ್ಲಿ ಬೀದಿ ನಾಟಕ, ಶ್ರಮದಾನ ಹಾಗೂ ಬುಡಕಟ್ಟು ಜನಾಂಗಗಳ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ಶೈಕ್ಷಣಿಕ ಅಧ್ಯಯನವನ್ನು ನಡೆಸುವ ದೃಷ್ಟಿಕೋನದೊಂದಿಗೆ ಎಚ್ ಡಿ ಕೋಟೆಯ ಬಸವನಗಿರಿಯಲ್ಲಿ ಗ್ರಾಮೀಣ ಅಧ್ಯಯನ ಶಿಬಿರವನ್ನು ಮೇ 22 ರಿಂದ ಆರಂಭಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ