ಪಣಜಿ: ಗೋವಾದಲ್ಲಿ ಮೇ 7 ರಂದು ಒಂದೇ ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆದಿದೆ. ರಾಜ್ಯಾದ್ಯಂತ ಬೆಳಿಗ್ಗೆಯಿಂದಲೇ ಉತ್ಸಾಹದಿಂದ ಮತದಾನಕ್ಕೆ ಮತದಾರರು ಆಗಮಿಸುತ್ತಿರುವ ದೃಶ್ಯ ಕಂಡುಬಂದಿದೆ. ಗೋವಾ ರಾಜ್ಯದ ಉತ್ತರ ಗೋವಾದಲ್ಲಿ ಬೇಳಿಗ್ಗೆ 9 ಗಂಟೆಯವರೆಗೆ ಶೇ 12.80 ರಷ್ಟು ಮತ್ತು ದಕ್ಷಿಣ ಗೋವಾದಲ್ಲಿ ಶೇ.13.24 ರಷ್ಟು ಮತದಾನವಾಗಿರುವು ದಾಗಿ ಮಾಹಿತಿ ಲಭ್ಯವಾಗಿದೆ. ಬೆಳಿಗ್ಗೆ 9 ಗಂಟೆಯವರೆಗೆ ಗೋವಾ ರಾಜ್ಯದಲ್ಲಿ ಒಟ್ಟೂ ಶೇ 13.02 ರಷ್ಟು ಮತದಾನವಾಗಿದೆ. ಮಧ್ಯಾಹ್ನ 11 ಗಂಟೆಯವರೆಗೆ ಗೋವಾದಲ್ಲಿ ಶೇ 30.90 ರಷ್ಟು ಮತದಾನವಾಗಿದೆ.
ಉತ್ತರ ಗೋವಾ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಕೇಂದ್ರ ಸಚಿವ ಶ್ರೀಪಾದ ನಾಯ್ಕ ರವರು ಪಣಜಿ ಸಮೀಪದ ರಾಯಬಂದರ್ ಸಾಪೇಂದ್ರದ ಮತಗಟ್ಟೆಯಲ್ಲಿ ತಮ್ಮ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು. ಗೋವಾದ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸುವುದು ಮಾತ್ರವಲ್ಲದೆಯೇ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಸಾಖಳಿ ಕೋಠಂಬಿ ಕ್ಷೇತ್ರದ ಮತಗಟ್ಟೆಯಲ್ಲಿ ತಮ್ಮ ಪತ್ನಿ ಸುಲಕ್ಷಣಾ ಸಾವಂತ್ ರವರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ರವರು ದೋನಾಪಾವುಲ್‍ನಲ್ಲಿ ತಮ್ಮ ಪತ್ನಿಯೊಂದಿಗೆ ಮತಚಲಾಯಿಸಿದರು.
ಗೋವಾ ರಾಜ್ಯದಲ್ಲಿ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆದಿದ್ದು, ಬಿರು ಬಿಸಿಲನ್ನೂ ಲೆಕ್ಕಿಸದೆಯೇ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತಗಟ್ಟೆಗೆ ಆಗಮಿಸುತ್ತಿರುವ ದೃಶ್ಯ ಕಂಡುಬಂತು.
ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ:
ಗೋವಾದ ಬಿಚೋಲಿ ನಗರದ ಮತಗಟ್ಟೆಯೊಂದರ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಬೆಳಿಗ್ಗೆ ಸುಮಾರು 27 ನಿಮಿಷಗಳ ಕಾಲ ತಡವಾಗಿ ಮತದಾನ ಪ್ರಕ್ರಿಯೆ ಆರಂಭಗೊಳ್ಳುವಂತಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ